QR Code Business Card

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣಹೋಮ ಮತ್ತು ಸರಸ್ವತಿ ಪೂಜೆ

ದಿನಾಂಕ 29-06-2015 ನೇ ಸೋಮವಾರದಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ಪುತ್ತೂರು ಇಲ್ಲಿ ಕಶೆಕೋಡಿ ಸೂರ್ಯನಾರಾಯಣ ಭಟ್ಟರ ನೇತೃತ್ವದಲ್ಲಿ ಗಣಹೋಮ ಮತ್ತು ಸರಸ್ವತಿ ಪೂಜೆ ಶಾಲಾ ಸಭಾಂಗಣದಲ್ಲಿ ನಡೆಯಿತು.

2

3

1

4

ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿ ಸದಸ್ಯರಾದ ಶ್ರೀ ಬಿರ್ಮಣ್ಣ ಗೌಡ ಮತ್ತು ಖಜಾಂಜಿ ಶ್ರೀ ಅಚ್ಯುತ್ ನಾಯಕ್, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಶ್ರೀ ರವಿ ಮುಂಗ್ಲಿಮನೆ, ಶಾಲಾ ಮುಖ್ಯೋಪಾಧ್ಯಾಯರು ಶ್ರೀ ಸತೀಶ್ ಕುಮಾರ್ ರೈ, ಪ್ರಾಥಮಿಕ ಶಾಲಾ ಮುಖ್ಯಗುರುಗಳಾದ ಶ್ರೀ ರಾಮ ನಾಕ್, ಕೆ.ಜಿ.ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಮಮತಾ, ಶೈಕ್ಷಣಿಕ ಸಂಯೋಜಕರಾದ ಶ್ರೀ ರಘುರಾಜ್, ಹಾಗೂ ಪ್ರಸ್ತುತ 2015-16 ನೇ ಶೈಕ್ಷಣಿಕ ವರ್ಷಕ್ಕೆ ಹೊಸದಾಗಿ ಸೇರ್ಪಡೆಯಾದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹಾಗೂ ಅವರ ಹೆತ್ತವರು, ಮತ್ತು ಶಿಕ್ಷಕ ವೃಂದದವರು ಭಾಗವಹಿಸಿದ್ದರು. ಪೂಜೆಯ ಬಳಿಕ ಎಲ್ಲರಿಗೂ ಪ್ರಸಾದ ವಿತರಿಸಲಾಯಿತು.