QR Code Business Card

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪೋಷಕರ ಸಭೆ

2016-17 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ದಿನಾಂಕ 25-04-2016 ರಂದು ಶಾಲಾ ಸಭಾಂಗಣದಲ್ಲಿ ನಡೆಸಲಾಯಿತು.

P_20160625_144614_EFF

P_20160625_143038

P_20160625_143047

P_20160625_143436

P_20160625_144517_EFF

ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಯೋಗ ಶಿಕ್ಷಕರಾದ ಶ್ರೀ ಜಯರಾಮರವರು ಪೋಷಕರಿಗೆ ಪ್ರಾಣಾಯಾಮ ಯೋಗದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು. ತದನಂತರ ಮುಖ್ಯೊಪಾಧ್ಯಾಯರು ಶೈಕ್ಷಣಿಕ ವರ್ಷದ ಕಾರ್ಯಯೋಜನೆಯ ಬಗ್ಗೆ ಪೋಷಕರಿಗೆ ಸಂಪೂರ್ಣ ಮಾಹಿತಿ ನೀಡುವುದರ ಮೂಲಕ ಹೆತ್ತವರ ಸಹಕಾರವನ್ನು ಕೋರಿದರು.

ಸಭೆಯಲ್ಲಿ ಎಲ್ಲಾ ಶಿಕ್ಷಕರೂ ಭಾಗವಹಿಸಿದ್ದರು. ಶಿಕ್ಷಕರು ಮತ್ತು ಪೋಷಕರೊಂದಿಗೆ ಶೈಕ್ಷಣಿಕ ವಿಚಾರದಲ್ಲಿ ವಿಚಾರವಿನಿಮಯ ನಡೆಯುವುದರ ಮೂಲಕ ಕಾರ್ಯಕ್ರಮವನ್ನು ಕೊನೆಗೊಳಿಸಲಾಯಿತು.