QR Code Business Card

ಸರಸ್ವತಿ ಹವನ, ಶಾರದಾಪೂಜೆ, ಅಕ್ಷರಾಭ್ಯಾಸ ಕಾರ್ಯಕ್ರಮ

ಪುರೋಹಿತ ಶ್ರೀ ಕಾರ್ತಿಕ್ ಕಾಟುಕುಕ್ಕೆ ಮತ್ತು ಬಳಗ ಸರಸ್ವತಿ ಹವನ, ಶಾರದಾಪೂಜೆ, ಅಕ್ಷರಾಭ್ಯಾಸ ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಸುಮಾರು 80 ಕ್ಕೂ ಪುಟಾಣೆಗಳು ಅಕ್ಷರಾಭ್ಯಾಸದ ಮೂಲಕ ತಮ್ಮ ಜ್ಞಾನಾರಂಭಕ್ಕೆ ಶುಭ ಮುಹೂರ್ತವಿರಿಸಿದರು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಶ್ರೀ ವೆಂಕಟೇಶ್ವರ ಅಮೈ ಪೂಜಾ ಕರ್ತೃತ್ವ ನಿರ್ವಹಿಸಿದರು. ಶಾಲಾ ಆಡಳಿತ ಮಂಡಳಿ ಸದಸ್ಯರು, ಪೋಷಕರು, ಶಾಲಾ ಶಿಕ್ಷಕ-ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಿಕ್ಷಕ ವೃಂದದವರಿಂದ ವಿಶೇಷ ಭಜನಾ ಕಾರ್ಯಕ್ರಮ ನೆರವೇರಿತು. ಸರ್ವರಿಗೂ ಶುಚಿ-ರುಚಿ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

dsc_1137

p_20161008_102920

p_20161008_130335