QR Code Business Card

ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾದ ಕ್ರೀಡಾಕೂಟಕ್ಕೆ ಪ್ರಣಮ್ಯಾ ಶೆಟ್ಟಿ ಆಯ್ಕೆ

Pranamyaಡಿಸೆಂಬರ್ 26 ರಿಂದ 29 ರ ವರೆಗೆ ಒರಿಸ್ಸಾದ ಭುವನೇಶ್ವರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 8 ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಪ್ರಣಮ್ಯಾ ಶೆಟ್ಟಿ (ಗಂಗಾಧರ ಶೆಟ್ಟಿ ಮತ್ತು ಶುಭಲಕ್ಷ್ಮಿ ಶೆಟ್ಟಿ, ಕೈಕಾರ ದಂಪತಿ ಪುತ್ರಿ) 14 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಚಕ್ರ ಎಸೆತ ಮತ್ತು ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ಫೆಬ್ರವರಿ 6 ರಿಂದ 9 ರ ವರೆಗೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆಯುವ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾಳೆ ಎಂದು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಕುಮಾರ್ ರೈ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.