QR Code Business Card

ರಿಲೇ ಸ್ಪರ್ಧೆಯಲ್ಲಿ ಹಿಮಾನಿ ಜಿ. ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆ

Himaniವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 9 ನೇ ತರಗತಿಯ ವಿದ್ಯಾರ್ಥಿನಿ ಹಿಮಾನಿ ಜಿ. (ಪದ್ಮನಾಭ ಗೌಡ ಹಾಗೂ ಕವಿತ ದಂಪತಿಯ ಪುತ್ರಿ) ಇವಳು ಫೆಬ್ರವರಿ 20 ರಿಂದ 23 ರ ವರೆಗೆ ಗುಜರಾತ್­ನ ವಡೋದರದಲ್ಲಿ ನಡೆಯುವ ಪ್ರೌಢಶಾಲಾ ವಿಭಾಗದ ಬಾಲಕರ ಬಾಲಕಿಯರ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದು, 4×100 ಮೀ ರಿಲೇ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾಳೆಂದು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಕುಮಾರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.