QR Code Business Card

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

ದಿನಾಂಕ 15-5-2017 ರಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2017 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 600 ಕ್ಕೂ ಅಧಿಕ ಅಂಕ ಗಳಿಸಿದ 35 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಮಕ್ಕಳನ್ನು ಶಾಲು ಹೊದಿಸಿ ಸನ್ಮಾನಿಸಿ, ಮಕ್ಕಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರು, ಸಂಚಾಲಕರು, ಸದಸ್ಯರು, ಪೋಷಕರು ಹಾಗೂ ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರು ಸ್ವಾಗತಿಸಿ, ಶ್ರೀಮತಿ ಸಾಯಿಗೀತಾ ವಂದಿಸಿ, ಶ್ರೀಮತಿ ಸೌಮ್ಯ ಕುಮಾರಿ ಕಾರ್ಯಕ್ರಮ ನಿರೂಪಿಸಿದರು.

vems-felicitation

vems-felicitation1