QR Code Business Card

ಕಲಾ ಕಾರ್ಯಾಗಾರ

ದಕ್ಷಿಣ ಕನ್ನಡ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ವತಿಯಿಂದ ಶೈಕ್ಷಣಿಕ ಕಲಾ ಕಾರ್ಯಾಗಾರ ದಿನಾಂಕ 15-7-2017 ರಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ಜರಗಿತು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ವೆಂಕಟೇಶ್ವರ ಅಮೈ ಸಭಾಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ್ ಬಿ. ಇವರನ್ನು ಸನ್ಮಾನಿಸಲಾಯಿತು. ಗೋಪಾಲಕೃಷ್ಣ ಅವರು ಚಿತ್ರಕಲಾ ಹಸ್ತಪತ್ರಿಕೆಯನ್ನು ಬಿಡುಗಡೆ ಮಾಡಿದರು. ವೇದಿಕೆಯಲ್ಲಿ ದ.ಕ.ಜಿಲ್ಲಾ ಚಿತ್ರಕಲಾ ಶಿಕ್ಷಕ ಸಂಘದ ಅಧ್ಯಕ್ಷ ಮಹಾಬಲ ಕುಳ, ಕಾರ್ಯದರ್ಶಿ ದಿನೇಶ್ ಶೆಟ್ಟಿಗಾರ್, ತಾಲೂಕು ಚಿತ್ರಕಲಾ ಶಿಕ್ಷಕ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ಬೆಟ್ಟಂಪಾಡಿ, ಶಾಲಾ ಮುಖ್ಯೋಪಾಧ್ಯಾಯರಾದ ಸತೀಶ್ ಕುಮಾರ್ ರೈ ಉಪಸ್ಥಿತರಿದ್ದರು. ಬಿಳಿನೆಲೆ ಗೋಪಾಲಕೃಷ್ಣ ಪ್ರೌಢ ಶಾಲೆಯ ದಿನೇಶ್ ಕುಂದರ್ ಸ್ವಾಗತಿಸಿ, ಕುಂಬ್ರ ಸರಕಾರಿ ಪ್ರೌಢ ಶಾಲೆಯ ಪ್ರಕಾಶ್ ವಿಟ್ಲ ವಂದಿಸಿದರು. ಅಲಂಕಾರು ದುರ್ಗಾಂಬಾ ಪ್ರೌಢ ಶಾಲೆಯ ಶ್ರೀಪತಿ ರಾವ್ ಕಾರ್ಯಕ್ರಮ ನಿರೂಪಿಸಿದರು.

drawing class

drawing class (1)