QR Code Business Card

ಗಣಹೋಮ ಮತ್ತು ಸರಸ್ವತಿ ಹವನ

2018 ರ ಜೂನ್ 2 ರಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ’ಗಣಹೋಮ’ ಮತ್ತು ’ಸರಸ್ವತಿ ಹವನ’ವು ವೇದಮೂರ್ತಿ ಕಶೆಕೋಡಿ ಸೂರ್ಯನಾರಾಯಣ ಭಟ್ ಇವರ ನೇತೃತ್ವದಲ್ಲಿ ನಡೆಯಿತು. ವೇದಮೂರ್ತಿ ಕಶೆಕೋಡಿ ಸೂರ್ಯನಾರಾಯಣ ಭಟ್ ಇವರು ಪೂಜಾಕಾರ್ಯ ನಿರ್ವಹಿಸಿ ಎಲ್ಲರಿಗೂ ಶುಭ ಹಾರೈಸಿದರು. ಶಾಲಾ ಆಡಳಿತ ಅಧ್ಯಕ್ಷ ಶ್ರೀ ವೆಂಕಟೇಶ್ವರ ಅಮೈ ಹವನದ ಕರ್ತೃತ್ವ ವಹಿಸಿದ್ದರು. ಆಡಳಿತ ಮಂಡಳಿ ಸದಸ್ಯರು, ಶಾಲಾ ಶಿಕ್ಷಕ ವೃಂದದವರು, ಪೋಷಕರ ಬಂಧುಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.