QR Code Business Card

ವಿವೇಕಾನಂದ PRE-NURSERY ವಿಭಾಗ ಉದ್ಘಾಟನೆ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 14-6-2018 ನೇ ಗುರುವಾರದಂದು ವಿವೇಕಾನಂದ PRE-NURSERY ವಿಭಾಗವನ್ನು ಉದ್ಘಾಟಿಸಲಾಯಿತು. ವಿವೇಕಾನಂದ ವಸತಿ ನಿಲಯದ ಮುಖ್ಯ ಕ್ಷೇಮ ಪಾಲಕಿ ಶ್ರೀಮತಿ ಜಯಂತಿ ನಾಯಕ್ ಉದ್ಘಾಟಿಸಿ ಶುಭ ಹಾರೈಸಿದರು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಶ್ರೀ ವೆಂಕಟೇಶ್ವರ ಅಮೈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಆಡಳಿತ ಮಂಡಳಿ ಸದಸ್ಯೆ ಸುನೀತಾ ರವೀಂದ್ರ, ನರೇಂದ್ರ ಪಿ.ಯು.ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷೆ ರೂಪಲೇಖ, ಪ್ರಾಂಶುಪಾಲೆ ಹರಿಣಿ ಪುತ್ತೂರಾಯ, ಶಾಲಾ ಹಿರಿಯ ವಿದ್ಯಾರ್ಥಿ, ಉದ್ಯಮಿ ಕೃಷ್ಣಾನಂದ ಪೈ ಉಪಸ್ಥಿತರಿದ್ದರು.ಶಾಲಾ ಮುಖ್ಯೋಪಾಧ್ಯಾಯರು ಸತೀಶ್ ಕುಮಾರ್ ರೈ ಪ್ರಸ್ತಾವಿಸಿ, ಸ್ವಾಗತಿಸಿದರು. ಕು.ಹಿತಾ ಪ್ರಾರ್ಥಿಸಿ, ಶ್ರೀ ವೆಂಕಟೇಶ್ ಪ್ರಸಾದ್ ವಂದಿಸಿದರು. ಶಿಕ್ಷಕ ಗಣೇಶ್ ಏತಡ್ಕ ಕಾರ್ಯಕ್ರಮ ನಿರೂಪಿಸಿದರು.