QR Code Business Card

72ನೇ ಸ್ವಾತಂತ್ರ್ಯ ದಿನಾಚರಣೆ

ವಿವೇಕಾನಂದ ಆಂಗ್ಲ ಮಾಧ್ಯಮಶಾಲೆ ತೆಂಕಿಲ ಪುತ್ತೂರು ಮತ್ತು ವಿವೇಕಾನಂದ ಬಿ.ಎಡ್ ಕಾಲೇಜು ಮತ್ತು ನರೇಂದ್ರ ಪಿ.ಯು.ಕಾಲೇಜು, ತೆಂಕಿಲ ಪುತ್ತೂರು ಇವುಗಳ ಸಂಯುಕ್ತ ಆಶ್ರಯದಲ್ಲಿ 72 ನೇ ಸ್ವಾತಂತ್ರ್ಯ ದಿನಾಚರಣೆಯು ದಿನಾಂಕ 15-8-2018 ರಂದು ಶಾಲಾ ಮೈದಾನದಲ್ಲಿ ಸಂಭ್ರಮದಿಂದ ನಡೆಯಿತು.

ಭಾರತೀಯ ನೌಕದಳದ ನಿವೃತ್ತ ಯೋಧರಾದ ಶ್ರೀಪ್ರಕಾಶ್ ಕುಕ್ಕಿಲ ಇವರು ಮುಖ್ಯ ಅತಿಥಿಯಾಗಿ ಆಗಮಿಸಿ, ಧ್ವಜಾರೋಹಣ ಗೈದುದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಸೇನಾನಿಗಳನ್ನು ನಾವು ಸದಾ ಸ್ಮರಿಸಬೇಕು ಮಾತ್ರವಲ್ಲ ಸಿಕ್ಕಿದ ಸ್ವಾತಂತ್ರ್ಯವನ್ನು ಉಳಿಸುವಲ್ಲಿ ಮಕ್ಕಳು ಪ್ರಧಾನ ಪಾತ್ರವಹಿಸಬೇಕು ಎಂದು ಹೇಳಿದರು.

ಸಮಾರಂಭದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಮತ್ತು ವಿವೇಕಾನಂದ ಬಿ.ಎಡ್ ಕಾಲೇಜು ಮತ್ತು ನರೇಂದ್ರ ಪಿ.ಯು.ಕಾಲೇಜು, ತೆಂಕಿಲ ಪುತ್ತೂರು ಇದರಅಧ್ಯಕ್ಷರು, ಸಂಚಾಲಕರು, ಆಡಳಿತಮಂಡಳಿ ಸದಸ್ಯರು, ಪೋಷಕರು, ಶಿಕ್ಷಕ ಶಿಕ್ಷಕೇತರ ವೃಂದ, ವಿದ್ಯಾರ್ಥಿ ವೃಂದ ಪಾಲ್ಗೊಂಡಿದ್ದರು.ಮುಖ್ಯೋಪಾಧ್ಯಾಯರಾದ ಸತೀಶ್ ಕುಮಾರ್ ರೈ ಸ್ವಾಗತಿಸಿ, ಶಿಕ್ಷಕ ರಾಧಕೃಷ್ಣ ರೈ ವಂದಿಸಿದರು. ಶಿಕ್ಷಕಿಸುಪ್ರೀತಾ ರೈ ಕಾರ್ಯಕ್ರಮ ನಿರೂಪಿಸಿದರು.