QR Code Business Card

ಶಾರದಾ ಪೂಜೆ, ಅಕ್ಷರಾಭ್ಯಾಸ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 10-10-2018 ಬುಧವಾರ ವೇದಮೂರ್ತಿ ಶ್ರೀ ಕಶೆಕೋಡಿ ಸೂರ್ಯನಾರಾಯಣ ಭಟ್ ಮತ್ತು ಬಳಗದವರಿಂದ ಶಾರದಾಪೂಜೆ, ಅಕ್ಷರಾಭ್ಯಾಸ ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಶಾರದಾ ಪೂಜೆಯ ಬಳಿಕ ಸುಮಾರು 50 ಕ್ಕೂ ಪುಟಾಣೆಗಳು ಅಕ್ಷರಾಭ್ಯಾಸದ ಮೂಲಕ ತಮ್ಮ ಜ್ಞಾನಾರಂಭಕ್ಕೆ ಶುಭ ಮುಹೂರ್ತವಿರಿಸಿದರು. ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರಿಂದ ಭಜನಾ ಕಾರ್ಯಕ್ರಮ ನೆರವೇರಿತು. ಶಾಲಾ ಶಿಕ್ಷಕಿಯರಿಂದ ಶ್ರೀ ಲಲಿತಾ ಸಹಸ್ರನಾಮ ಪಾರಾಯಣ ನಡೆಯಿತು. ಶಾಲಾ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕ ರಕ್ಷಕ ಸಂಘದ ಸರ್ವಸದಸ್ಯರು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.