QR Code Business Card

ವಿವೇಕಾನಂದಕ್ಕೆ ಚದುರಂಗದಲ್ಲಿ ಹಲವು ಪ್ರಶಸ್ತಿ

ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬಂಟ್ವಾಳ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆ, ಬಂಟ್ವಾಳದಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿ ಗೆದ್ದುಕೊಂಡಿದೆ ಮತ್ತು ಗದಗದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಚೆಸ್ ಪಂದ್ಯಾಟಕ್ಕೆ ಶಾಲಾ ತಂಡ ಆಯ್ಕೆಯಾಗಿರುತ್ತದೆ.

DSCF5231

14 ರ ವಯೋಮಾನದ ಬಾಲಕರ ವಿಭಾಗದಲ್ಲಿ ಶಶಾಂಕ ಭಟ್, 14 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಶ್ರೀದೇವಿ ಕೋಟೆ, ದೀಪ್ತಿಲಕ್ಷ್ಮಿ, ಶುಭಶ್ರೀ, 17 ರ ವಯೋಮಾನದ ಬಾಲಕರ ವಿಭಾಗದಲ್ಲಿ ಚಿರಾಗ್.ಜಿ.ಜೆ, ಶಶಾಂಕ್.ಎಸ್.ಎಲ್ ಮತ್ತು 17 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪಂಚಮಿ ಸರ್ಪಂಗಳ, ದೀಕ್ಷಾ ಪ್ರಥಮ ಬಹುಮಾನ ಪಡೆದಿದ್ದಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರಾದ ಸತೀಶ್ ರೈ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.