QR Code Business Card

ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ 100% ಫಲಿತಾಂಶ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ, ಮಲ್ಲೇಶ್ವರಂ ಬೆಂಗಳೂರು ಇವರು 2015-16 ನೇ ಸಾಲಿನಲ್ಲಿ ನಡೆಸಿದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ 100 % ಫಲಿತಾಂಶ ದಾಖಲಿಸಿದೆ. ಹೈಯರ್ ಗ್ರೇಡ್ ಪರೀಕ್ಷೆಯಲ್ಲಿ ಒಟ್ಟು 43 ವಿದ್ಯಾರ್ಥಿ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದು 19 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 21 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 3 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಲೋವರ್ ಗ್ರೇಡ್‌ನಲ್ಲಿ ಒಟ್ಟು 24 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 16 ಮಂದಿ ವಿಶಿಷ್ಟ ಶ್ರೇಣಿ, 6 ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆಂದು ಶಾಲಾ ಮುಖ್ಯಗುರು ಸತೀಶ್ ಕುಮಾರ್ ರೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.