QR Code Business Card

ಗಣರಾಜ್ಯೋತ್ಸವ ಆಚರಣೆ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಇಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಪುತ್ತೂರಿನ ಖ್ಯಾತ ನ್ಯಾಯವಾದಿಗಳಾದ ಕುಂಬ್ರ ದುರ್ಗಾಪ್ರಸಾದ್ ರೈ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಾ, ಸ್ವಾಮಿ ವಿವೇಕಾನಂದರು ವಿದೇಶಗಳಲ್ಲಿ ಹೆಸರುಗಳಿಸಿದ ನಂತರ ರಾಮಕೃಷ್ಣ ಪರಮಹಂಸರು ಅತ್ಯಂತ ಸಂತೋಷ ಪಟ್ಟರು. ಅದೇ ರೀತಿ ವಿದ್ಯಾರ್ಥಿಗಳಾದ ನೀವೆಲ್ಲರೂ ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಸಾಧನೆ ಮಾಡಿ, ಭಾರತ ದೇಶದ ಸಂಪನ್ಮೂಲಗಳಾಗಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಡಾ| ಕೆ.ಎಂ. ಕೃಷ್ಣ ಭಟ್ ಕೊಂಕೋಡಿ, ಖಜಾಂಜಿ ಅಚ್ಚುತ ನಾಯಕ್, ಸದಸ್ಯೆ ರೂಪಲೇಖ ಪಾಣಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ಸತೀಶ್ ರೈ ಸ್ವಾಗತಿಸಿದರು. ಸಹಶಿಕ್ಷಕ ಗಣೇಶ್ ಏತಡ್ಕ ಕಾರ್ಯಕ್ರಮ ನಿರ್ವಹಿಸಿದರು.

20160126095730

20160126095714
20160126095724

20160126095411