QR Code Business Card

ಜಿಲ್ಲಾ ಮಟ್ಟದ ಜ್ಞಾನ-ವಿಜ್ಞಾನ ಮೇಳ

ದಿನಾಂಕ 11-09-2015 ನೇ ಶುಕ್ರವಾರ ವಿದ್ಯಾಭಾರತಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ ಇದರ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಜ್ಞಾನ-ವಿಜ್ಞಾನ ಮೇಳ 2015 ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ನಡೆಯಿತು.

DSCF5029

DSCF5032

ಕಾರ್ಯಕ್ರಮದ ಉದ್ಘಾಟನೆಯನ್ನು ಮಾಧ್ಯಮಿಕ ಶಿಕ್ಷಕರ ಸಂಘದ ಮುಖ್ಯಸ್ಥರು ಹಾಗೂ ಪುತ್ತೂರು ತಾಲೂಕು ಮುಖ್ಯೋಪಾಧ್ಯಾಯರ ಮತ್ತು ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಎಚ್.ಡಿ.ಶಿವರಾಮ್, ಇವರು ನೆರವೇರಿಸಿದರು. ಇವರು ತಮ್ಮ ಉದ್ಘಾಟನಾ ಮಾತಿನಲ್ಲಿ ನಮ್ಮ ದೇಶದ ವಿಜ್ಞಾನಿಗಳು ನಮ್ಮ ದೇಶದಲ್ಲೇ ಉಳಿದರೆ ದೇಶವನ್ನು ಅಭಿವೃದ್ಧಿ ಪಥದ ಕಡೆಗೆ ಕೊಂಡೊಯ್ಯಬಹುದು. ಯುವ ವಿಜ್ಞಾನಿಗಳಾದ ನೀವು ವೈಜ್ಞಾನಿಕತೆಯನ್ನು ಬೆಳೆಸಿ ಉತ್ತಮ ವಿಜ್ಞಾನಿಗಳಾಗಿ ಎಂದು ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ, ಪುತ್ತೂರು ಇದರ ಅಧ್ಯಕ್ಷರಾದ ಡಾ.ಕೆ.ಎಂ. ಕೃಷ್ಣ ಭಟ್ ವಹಿಸಿದ್ದರು.

ವೇದಿಕೆಯಲ್ಲಿ ವಿದ್ಯಾಭಾರತಿ ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಯದರ್ಶಿಗಳಾದ ಶ್ರೀ ಲೋಕಯ್ಯ ಡಿ., ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ವಿ.ಜಿ.ಭಟ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಪ್ರಾರ್ಥನೆಯೊಂದಿಗೆ ಆರಂಭಿಸಿ, ಮುಖ್ಯೋಪಾಧ್ಯಾಯರಾದ ಸತೀಶ್ ಕುಮಾರ್ ರೈ ಸ್ವಾಗತಿಸಿ, ವಿದ್ಯಾಭಾರತಿ ದಕ್ಷಿಣ ಕನ್ನಡ ಜಿಲ್ಲೆಯ ಉಪಾಧ್ಯಕ್ಷರಾದ ಶ್ರೀ ವೆಂಕಟರಮಣ ರಾವ್ ಪ್ರಾಸ್ತಾವಿಕ ಮಾತುಗಳನ್ನಾಡಿ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ರಾಮ ನಾಯ್ಕ್ ವಂದಿಸಿದರು. ಶಿಕ್ಷಕ ಗಣೇಶ್ ಏತಡ್ಕ ಕಾರ್ಯಕ್ರಮ ನಿರೂಪಿಸಿದರು.