QR Code Business Card

ಹಿರಿಯ ವಿದ್ಯಾರ್ಥಿಗಳ ಸಮಾವೇಶ

ಇಲ್ಲಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮಾವೇಶವು ದಿನಾಂಕ 25-12-2015 ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರು ಡಾ.ಕೆ.ಎಂ.ಕೃಷ್ಣ ಭಟ್ ವಹಿಸಿ, ಹಿರಿಯ ವಿದ್ಯಾರ್ಥಿಗಳು ಸಮಾಜಮುಖಿ ಚಿಂತನೆಯನ್ನು ಬೆಳಸಿಕೊಳ್ಳಬೇಕು ಹಾಗೂ ಪೋಷಕರ ಶಾಲೆಯ ಸಮಾಜದ ಅವಶ್ಯಕತೆಗಳನ್ನು ಪೂರೈಸುವ ಮನಸ್ಸನ್ನು ಹೊಂದಿರಬೇಕು ಎಂದು ಹೇಳಿದರು.

DSCF5692

DSCF5685

ವೇದಿಕೆಯಲ್ಲಿ ಶಾಲಾ ಸಂಚಾಲಕರಾದ ಶ್ರೀ ರವೀಂದ್ರ.ಪಿ ಮಾತನಾಡಿ, ನಮ್ಮ ಸಂಸ್ಥೆಯಿಂದ ಕಲಿತ ವಿದ್ಯಾರ್ಥಿಗಳು ಸಮಾಜದಲ್ಲಿ ಉತ್ತಮ ಸ್ಥಾನಮಾನಗಳನ್ನು ಗಳಿಸಿ ಸಮಾಜದ ವಿವಿಧ ಚಟುವಟಿಕೆಗಳನ್ನು ಗುರುತಿಸಿಕೊಳ್ಳಬೇಕು, ಶಾಲೆಯ ಶ್ರೇಯೋಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರು ಪ್ರೋ.ವಿ.ಜಿ.ಭಟ್ ಮಾತನಾಡಿ ಹಿರಿಯ ವಿದ್ಯಾರ್ಥಿಗಳ ಸಂಘವು ಶಾಲೆಯಲ್ಲಿ ಅನೇಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ಹೆಚ್ಚು ಹೆಚ್ಚು ವಿದ್ಯಾರ್ಥಿಗಳು ಈ ಸಂಘಟನೆಗೆ ಬರುವಂತರಾಗಬೇಕು ಎಂದು ಹೇಳಿದರು.

ಶಾಲಾ ಮುಖ್ಯೋಪಾಧ್ಯಾಯರು ಶ್ರೀ ಸತೀಶ್ ಕುಮಾರ್ ರೈ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಕಳೆದ ಶೈಕ್ಷಣಿಕ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಅಂತಿಮ ಪದವಿ ಪರೀಕ್ಷೆಯಲ್ಲಿ ರ್‍ಯಾಂಕ್ ಗಳಸಿದ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

2016-17ನೇ ಸಾಲಿಗೆ ನೂತನ ಸಮಿತಿಯನ್ನು ರಚಿಸಲಾಗಿ ಅಧ್ಯಕ್ಷರಾಗಿ ಶ್ರೀ ಸಚಿನ್, ಕಾರ್ಯದರ್ಶಿಯಾಗಿ ರಾಕೇಶ್ ಹಾಗೂ ಜೊತೆ ಕಾರ್ಯದರ್ಶಿಯಾಗಿ ಕು.ಪಲ್ಲವಿ.ಕೆ.ವಿ ಆಯ್ಕೆಯಾದರು. ವೇದಿಕೆಯಲ್ಲಿ ಹಿರಿಯ ಶಿಕ್ಷಕರಾದ ಶ್ರೀ ರಾಧಕೃಷ್ಣ ರೈ ಮತ್ತು ಶ್ರೀಮತಿ ಮೋಹಿನಿ.ಕೆ ಉಪಸ್ಥಿತರಿದ್ದರು. ನಿತಿನ್ ಕುಮಾರ್ ಸ್ವಾಗತಿಸಿ, ಕು.ಪಲ್ಲವಿ ವಂದಿಸಿದರು. ತುಷಾರ್ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಎಲ್ಲಾ ಶಿಕ್ಷಕ-ಶಿಕ್ಷಕಿಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.