ಪುತ್ತೂರು: ವಿವೇಕಾನಂದ ವಿದ್ಯಾಸಂಸ್ಥೆ, ತೆಂಕಿಲದಲ್ಲಿ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಶ್ರೀ ಪಿ.ಎನ್.ರಾಜಗೋಪಾಲ್, ನಿವೃತ್ತ ಸೇನಾಧಿಕಾರಿ ಸ್ವಾತಂತ್ರ್ಯೋತ್ಸವದ ಕುರಿತು ಮಾತನಾಡುತ್ತಾ ಭಾರತದ ಸೇನೆಯು ವಿಶ್ವದ ಸೇನೆಯ ಹಂತದಲ್ಲಿ ಮೂರನೇ ಸ್ಥಾನದಲ್ಲಿದ್ದು ಭಾರತ ಮಾತೆಯ ರಕ್ಷಣೆಗೆ ಸದಾ ಸಿದ್ಧವಾಗಿದೆ ಎಂದರು. ಶಾಂತಿಪ್ರಿಯಾ ಭಾರತ ಸ್ವಾತಂತ್ರ್ಯ ನಂತರ ಭಾರೀ ಶಸ್ತ್ರಾಸ್ತ್ರವನ್ನು ಎತ್ತಿ ಹೊರಡಬೇಕಾಯಿತು. ಭಾರತ ಶಾಂತಿಪ್ರಿಯ ದೇಶವಾದರೂ ಶತ್ರು ದೇಶದವರು ಕಾಲು ಕೆರೆದು ಯುದ್ಧಕ್ಕೆ ಬಂದಾಗ ಸಮರ್ಥ ಪ್ರತ್ಯುತ್ತರ ನೀಡಿದೆ. ಶ್ರೀ ನರೇಂದ್ರ ಮೋದಿ ಅಂತಹ ವಜ್ರದ ಶಕ್ತಿಯನ್ನು ಪಡೆದಿರುವುದು ನಮ್ಮ ದೇಶದ ಹೆಮ್ಮೆ ಎಂದು ನುಡಿದರು.
ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಅಧ್ಯಕ್ಷ ಡಾ. ಕೆ.ಎಂ ಕೃಷ್ಣ ಭಟ್, ಸಂಚಾಲಕ ಶ್ರೀ ರವೀಂದ್ರ.ಪಿ, ಕೋಶಾಧಿಕಾರಿ ಶ್ರೀ ಅಚ್ಯುತ ನಾಯಕ್, ಆಡಳಿತ ಮಂಡಳಿ ಸದಸ್ಯರಾದ ಶ್ರೀಮತಿ ಶೋಭಾ ಕೊಳತ್ತಾಯ, ಡಾ.ಸುಲೇಖ ವರದರಾಜ್, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯಗುರುಗಳಾದ ಶ್ರೀ ಸತೀಶ್ ಕುಮಾರ್ ರೈ, ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಮುಖ್ಯಗುರುಗಳಾದ ಶ್ರೀಮತಿ ಆಶಾ ಬೆಳ್ಳಾರೆ, ಇವರು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಶಿಕ್ಷಕರು, ಶಿಕ್ಷಕೇತರರು ಹಾಗೂ ವಿದ್ಯಾರ್ಥಿಗಳು, ವಿವೇಕಾನಂದ ಬಿ.ಎಡ್ ಹಾಗೂ ಡಿ.ಎಡ್ ಕಾಲೇಜು ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಎಲ್ಲಾ ವಿದ್ಯಾರ್ಥಿ ಶಿಕ್ಷಕರು ಭಾಗವಹಿಸಿದ್ದರು.
ಶಿಕ್ಷಕ ಶ್ರೀ ವೆಂಕಟೇಶ್ ಪ್ರಸಾದ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲಾಯಿತು. ಬಳಿಕ ೧೦ನೇ ತರಗತಿಯ ವಿದ್ಯಾರ್ಥಿಗಳ ಜೊತೆಗೆ ಶ್ರೀ ಪಿ.ಎನ್.ರಾಜಗೋಪಾಲ್ ಇವರು ಸೇನೆಯ ಬಗ್ಗೆ ಸಂವಾದ ಕಾರ್ಯಕ್ರಮ ನಡೆಸಿಕೊಟ್ಟರು.