ವಿಶ್ವಯೋಗ ದಿನಾಚರಣೆಯ ಅಂಗವಾಗಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ 20-6-2015 ನೇ ಶನಿವಾರದಂದು ಶಾಲೆಯ ಯಾದವಶ್ರೀ ಸಭಾಂಗಣದಲ್ಲಿ ಯೋಗ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಜೊತೆಗೆ ಸಭಾ ಕಾರ್ಯಕ್ರಮ ಹಾಗೂ ಯೋಗ ಪ್ರಾತ್ಯಕ್ಷಿಕೆಯ ಮೂಲಕ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶ್ರೀ ಗಿರೀಶ್ ಮಳಿ, ನ್ಯಾಯವಾದಿ, ಪುತ್ತೂರು ಇವರು ಇಂದಿನ ದಿನಗಳಲ್ಲಿ ಯೋಗದ ಮಹತ್ವ ಹಾಗೂ ಔಚಿತ್ಯತೆಯ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು. ವಿಶ್ವಯೋಗ ದಿನಾಚರಣೆಯ ಅಂಗವಾಗಿ ಮಕ್ಕಳಿಗೆ ಏರ್ಪಡಿಸಿದ್ದ ಪ್ರಬಂಧ ಹಾಗೂ ಭಾಷಣ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ವೇದಿಕೆಯಲ್ಲಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ರಾಮ ನಾಕ್ ಹಾಗೂ ಹಿರಿಯ ಶಿಕ್ಷಕಿ ಶ್ರೀಮತಿ ಪುಷ್ಪಲತ ಇವರು ಉಪಸ್ಥಿತರಿದ್ದರು. ಶ್ರೀ ಮಹೇಶ್ ಬಲ್ಲಾಳ್ ಕಾರ್ಯಕ್ರಮ ನಿರೂಪಿಸಿದರು. ಕು| ರೇಷ್ಮಾ ಬಹುಮಾನ ವಿಜೇತರ ಪಟ್ಟಿಯನ್ನು ವಾಚಿಸಿದರು. ಶ್ರೀ ಗಣೇಶ್ ಏತಡ್ಕ ವಂದಿಸಿದರು. ಹಿರಿಯ ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ಭಾಸ್ಕರ್ , ಶ್ರೀಮತಿ ನಮಿತಾ ಹಾಗೂ ಎಲ್ಲಾ ಶಿಕ್ಷಕ ವೃಂದದವರ ಸಹಕಾರದೊಂದಿಗೆ 5, 6 ಮತ್ತು 7ನೇ ತರಗತಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಯೋಗ ಪ್ರಾತ್ಯಕ್ಷಿಕೆ ಯನ್ನು ನಡೆಸಲಾಯಿತು.