ದಿನಾಂಕ 2-7-2015 ನೇ ಗುರುವಾರದಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ಪುತ್ತೂರು ಇದರ 2015-16 ನೇ ಶೈಕ್ಷಣಿಕ ಸಾಲಿನ ಪ್ರಾಥಮಿಕ ವಿಭಾಗದ 2ನೇ ತರಗತಿ ವಿದ್ಯಾರ್ಥಿಗಳ ಹೆತ್ತವರ ಸಭೆಯು ಶಾಲಾ ಸಭಾಂಗಣದಲ್ಲಿ ನಡೆಯಿತು.
ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ಉಪನ್ಯಾಸಕಿ ಮಾಧವಿ ಪಟೇಲ್, ಇವರು ಮಾತನಾಡಿ ಪ್ರತಿನಿತ್ಯ ವಿದ್ಯಾರ್ಥಿಯ ಚುಟುವಟಿಕೆ, ಅಂಕಪಟ್ಟಿ, ಪುಸ್ತಕಗಳನ್ನು ಗಮನಿಸಿ, ಶಾಲಾ ಮುಖ್ಯೋಪಾಧ್ಯಾಯರಿಗೆ ಮತ್ತು ಸಂಬಂಧಪಟ್ಟ ಶಿಕ್ಷಕರಿಗೆ ತಿಳಿಸುವುದು ಪೋಷಕರ ಜವಾಬ್ದಾರಿ ಎಂದರು.
ಪ್ರಾಥಮಿಕ ಶಾಲಾ ಮುಖ್ಯಗುರುಗಳಾದ ಶ್ರೀ ರಾಮ ನಾಕ್, ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿ ಸದಸ್ಯೆ ಶ್ರೀಮತಿ ಶೋಭಾ ಕೊಳತ್ತಾಯ, ಶಾಲಾ ಮುಖ್ಯೋಪಾಧ್ಯಾಯರು ಶ್ರೀ ಸತೀಶ್ ಕುಮಾರ್ ರೈ, ಕೆ.ಜಿ.ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಮಮತಾ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಶ್ರೀ ರವಿ ಮುಂಗ್ಲಿಮನೆ, ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಶ್ರೀಮತಿ ಸೌಮ್ಯಕುಮಾರಿ ಸ್ವಾಗತಿಸಿ, ಶ್ರೀಮತಿ ರತ್ನಮಾಲಾ ಕಾರ್ಯಕ್ರಮ ನಿರೂಪಿಸಿದರು.