ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ, ಇದರ 8 ನೇ ತರಗತಿ ವಿದ್ಯಾರ್ಥಿಗಳ ಮೊದಲ ಅವಧಿಯ ಪೋಷಕರ ಸಭೆಯು ಶಾಲಾ ಸಭಾಂಗಣದಲ್ಲಿ ಜುಲೈ 25 ರಂದು ನಡೆಯಿತು.
ಡಾ| ಶೋಭಿತಾ, ಉಪನ್ಯಾಸಕರು ವಿವೇಕಾನಂದ ಬಿ.ಎಡ್.ಕಾಲೇಜು ಪುತ್ತೂರು, ಮಾತನಾಡಿ ಸಮಾಜದಲ್ಲಿ ಅರ್ಥಪೂರ್ಣ ಬದುಕಿಗೆ ಪ್ರೀತಿಯೆ ಮುಖ್ಯ. ಮನೆಯಲ್ಲಿ ಪೋಷಕರು, ಶಾಲೆಯಲ್ಲಿ ಶಿಕ್ಷಕರು ಆದರ್ಶಪ್ರಾಯರಾದಾಗ ನಿಜವಾದ ಶಿಕ್ಷಣ ದೊರೆಯಲು ಸಾಧ್ಯ ಎಂದರು.
ಸತೀಶ್ ಕುಮಾರ್ ರೈ, ಮುಖ್ಯೋಪಾಧ್ಯಾಯರು ಪ್ರಾಸ್ತಾವಿಕ ಮಾತುಗಳನ್ನಾಡಿದರು.
ವೇದಿಕೆಯಲ್ಲಿ ರವಿ ಮುಂಗ್ಲಿಮನೆ, ಅಧ್ಯಕ್ಷರು ಶಿಕ್ಷಕ – ರಕ್ಷಕ ಸಂಘ, ರಾಮನಾಕ್ ಮುಖ್ಯೋಪಾಧ್ಯಾಯರು ಪ್ರಾಥಮಿಕ ವಿಭಾಗ, ಮಮತಾ ಬಿ. ಕೆ.ಜಿ.ವಿಭಾಗದ ಮುಖ್ಯಸ್ಥೆ ಉಪಸ್ಥಿತರಿದ್ದರು. ಶಿಕ್ಷಕಿ ರತ್ನಮಾಲಾ ಸ್ವಾಗತಿಸಿ, ಮಮತಾ ಪೈ ವಂದಿಸಿ, ರೇಷ್ಮಾ ಕಾರ್ಯಕ್ರಮ ನಿರೂಪಿಸಿದರು.