ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ, ಇದರ 6ನೇ ತರಗತಿ ವಿದ್ಯಾರ್ಥಿಗಳ ಪೋಷಕರ ಸಭೆಯು ಶಾಲಾ ಸಭಾಂಗಣದಲ್ಲಿ ಅಗಸ್ಟ್ 1 ರಂದು ನಡೆಯಿತು.
ನಯನಾ.ಪಿ.ರೈ, ದೈಹಿಕ ಶಿಕ್ಷಣ ಶಿಕ್ಷಕಿ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ತಿಂಗಳಾಡಿ ಇವರು ಮಾತನಾಡಿ ಮಗುವಿನ ಹೊಸ ಬದಲಾವಣೆಗೆ ಶಾಲೆ ಪೂರಕ ವಾತಾವರಣ ಕಲ್ಪಿಸುತ್ತದೆ. ನಮ್ಮ ಮಕ್ಕಳಿಗೆ ಹೊಸ ಅವಕಾಶವನ್ನು ಕಲ್ಪಿಸಿ, ಪಠ್ಯೇತರ ಚಟುವಟಿಕೆಗೆ ಪ್ರೋತ್ಸಾಹ ನೀಡುವುದು ಪೋಷಕರ ಕರ್ತವ್ಯವಾಗಬೇಕೆಂದು ಹೇಳಿದರು. ಸತೀಶ್ ಕುಮಾರ್ ರೈ, ಮುಖ್ಯೋಪಾಧ್ಯಾಯರು ಇವರು ಶಾಲಾ ನಿಯಮಗಳು ಧ್ಯೇಯಗಳನ್ನು ಪೋಷಕರಿಗೆ ತಿಳಿಸಿದರು.
ವೇದಿಕೆಯಲ್ಲಿ ರವಿ ಮುಂಗ್ಲಿಮನೆ, ಅಧ್ಯಕ್ಷರು ಶಿಕ್ಷಕ – ರಕ್ಷಕ ಸಂಘ, ರಾಮನಾಕ್ ಮುಖ್ಯೋಪಾಧ್ಯಾಯರು ಪ್ರಾಥಮಿಕ ವಿಭಾಗ, ಮಮತಾ ಬಿ. ಕೆ.ಜಿ.ವಿಭಾಗದ ಮುಖ್ಯಸ್ಥೆ ಮತ್ತು ತರಗತಿ ಶಿಕ್ಷಕರಾದ ಸುಗೀತಾ.ರೈ, ವಾಮನದಾಸ್ ಉಪಸ್ಥಿತರಿದ್ದರು. ಶಿಕ್ಷಕಿ ಸುಚಿತ್ರಾ ಪ್ರಭು ಸ್ವಾಗತಿಸಿ, ರಾಜಶೇಖರ್.ಬಿ.ಸಿ ವಂದಿಸಿ, ಅನುರಾಧಾ.ಎ ಕಾರ್ಯಕ್ರಮ ನಿರೂಪಿಸಿದರು.