ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾರದಾ ಪೂಜೆ ಹಾಗೂ ಅಕ್ಷರಾಭ್ಯಾಸ ಕಾರ್ಯಕ್ರಮ ದಿನಾಂಕ 19-10-2015 ಸೋಮವಾರ ವೇದಮೂರ್ತಿ ಶ್ರೀ ಕಶೆಕೋಡಿ ಸೂರ್ಯನಾರಾಯಣ ಭಟ್ ಮತ್ತು ಬಳಗದವರಿಂದ ನಡೆಯಿತು.
ಗಣಹೋಮ, ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರಿಂದ ಭಜನಾ ಕಾರ್ಯಕ್ರಮ ಹಾಗೂ ಶಾರದಾ ಪೂಜೆಯ ಬಳಿಕ ಸಣ್ಣ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಲಾಯಿತು. ಇದೇ ಸಂದರ್ಭದಲ್ಲಿ ಶಾಲಾ ಶಿಕ್ಷಕಿಯರಿಂದ ಶ್ರೀ ಲಲಿತಾ ಸಹಸ್ರನಾಮ ಪಾರಾಯಣ ನಡೆಯಿತು.
ಶಾಲಾ ಆಡಳಿತ ಮಂಡಳಿ ಸದಸ್ಯರಾದ ಶ್ರೀಮತಿ ಶೋಭಾ ಕೊಳತ್ತಾಯ, ಶಿಕ್ಷಕ ರಕ್ಷಕ ಸಂಘದ ಶ್ರೀ ರವಿ ಮುಂಗ್ಲಿಮನೆ, ವಿವೇಕಾನಂದ ಶಿಕ್ಷಕ ತರಬೇತಿ ಸಂಸ್ಥೆ, ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು, ವಿದ್ಯಾರ್ಥಿ ಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಉಪಹಾರ ಮತ್ತು ಪಾನೀಯ ವಿತರಿಸಲಾಯಿತು.