ಆಡಳಿತ ಮಂಡಳಿ, ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳ ನಾಲ್ಕು ಸ್ಥಂಭಗಳು. ಭಿನ್ನ ಭಿನ್ನ ಸಾಮರ್ಥ್ಯಗಳ ವಿದ್ಯಾರ್ಥಿಗಳೊಂದಿಗೆ ಪೋಷಕರು ಯಾವ ರೀತಿ ತಮ್ಮನ್ನು ತೊಡಗಿಸಿಕೊಳ್ಳಬೇಕು? ತಮ್ಮ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಪೋಷಕರೂ ಜವಾಬ್ದಾರರು ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಪ್ರೊ.ವಿ.ಜಿ.ಭಟ್ ಹೇಳಿದರು.
ಅವರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಹತ್ತನೇ ತರಗತಿಯ ಮಕ್ಕಳ ಹಾಗೂ ಪೋಷಕರ ಶೈಕ್ಷಣಿಕ ಕಾರ್ಯಾಗಾರದ ಅಧ್ಯಕ್ಷರಾಗಿ ಮಾತನಾಡುತ್ತಿದ್ದರು. ಕಾರ್ಯಾಗಾರದಲ್ಲಿ ಚಿನ್ಮಯ ವಿದ್ಯಾಲಯದ ಪ್ರಾಂಶುಪಾಲ ಶ್ರೀ ಪುಷ್ಪರಾಜ್ ಹಾಗೂ ಶ್ರೀ ಶಿಕಾರಿಪುರ ಕೃಷ್ಣಮೂರ್ತಿ ಸಂಪನ್ಮೂಲ ವ್ಯಕ್ತಿಗಳಾಗಿ ಅವಧಿಗಳನ್ನು ನಡೆಸಿಕೊಟ್ಟರು.
ವೇದಿಕೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಶೀ ವಿನೋದ್ ಶೆಟ್ಟಿ ಬೆಟ್ಟಂಪಾಡಿಗುತ್ತು, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷೆ ಶ್ರೀಮತಿ ರೂಪಲೇಖಾ ಪಾಣಾಜೆ, ಸದಸ್ಯೆ ಶ್ರೀಮತಿ ತ್ರಿವೇಣಿ ಪೆರ್ವೋಡಿ, ಉಪಸ್ಥಿತರಿದ್ದರು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕ-ರಕ್ಷಕ ಸಂಘದ ಶ್ರೀ ಗಿರೀಶ ಮಳಿ ಸ್ವಾಗತಿಸಿ, ಶ್ರೀ ಶಿವರಾಮ್ ಗೌಡ ಎಂ.ಎಸ್ ವಂದಿಸಿದರು. ಸಹ ಶಿಕ್ಷಕಿ ಶ್ರೀಮತಿ ಶಾಂತಿ ಕಾರ್ಯಕ್ರಮ ನಿರೂಪಿಸಿದರು.