ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮುಂದಿನ ಶೈಕ್ಷಣಿಕ ಸಾಲಿನಲ್ಲಿ 10 ನೇ ತರಗತಿಗೆ ಹೋಗಲಿರುವ ವಿದ್ಯಾರ್ಥಿಗಳಿಗಾಗಿ 40 ದಿನಗಳ ಬೇಸಿಗೆ ತರಗತಿಗಳು ದಿನಾಂಕ 31-03-2016 ನೇ ಗುರುವಾರದಂದು ಆರಂಭಗೊಂಡವು.
ಈ ತರಗತಿಗಳನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಸದಸ್ಯರು ಹಾಗೂ ವಿವೇಕಾನಂದ ಪದವಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಶ್ರೀನಿವಾಸ ಪೈ ಇವರು ಉದ್ಘಾಟಿಸಿ, ತರಗತಿಗಳಿಗೆ ಶುಭವನ್ನು ಹಾರೈಸಿದರು. ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀ ಹರೀಶ್ ಶಾಸ್ತ್ರಿ ಇವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.
ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ.ಕೆ.ಎಂ.ಕೃಷ್ಣ ಭಟ್, ವಿವೇಕಾನಂದ ಪದವಿ ಪೂರ್ವಕಾಲೇಜಿನ ಉಪನ್ಯಾಸಕರುಗಳಾದ ಶ್ರೀ ಕೇಶವ ಕುಮಾರ್ ಮತ್ತು ಶ್ರೀ ಪ್ರಸಾದ್ ಶಾನ್‌ಬಾಗ್, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್‌ಕುಮಾರ್‌ರೈ ಉಪಸ್ಥಿತರಿದ್ದರು. ಶಿಕ್ಷಕಿ ಶ್ರೀಮತಿ ಅನುರಾಧ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಶಾರದಾ ಶೆಟ್ಟಿ ವಂದಿಸಿದರು. ಶಿಕ್ಷಕ ಶ್ರೀ ರಾಧಕೃಷ್ಣ ರೈ ಕಾರ್ಯಕ್ರಮ ನಿರೂಪಿಸಿದರು.