ದಿನಾಂಕ 31-07-2016 ರ ರವಿವಾರದಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಪೋಷಕರಿಗಾಗಿ ಮಾಹಿತಿ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ವಿವೇಕಾನಂದ ಶಿಶುಮಂದಿರದ ಆಡಳಿತ ಮಂಡಳಿ ಅಧ್ಯಕ್ಷೆ ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ಸದಸ್ಯೆ ಡಾ.ಸುಧಾ ರಾವ್ ಮಾತನಾಡಿ ಆವೆಮಣ್ಣಿನ ಮುದ್ದೆಯಂತೆ ಇರುವ ಮಗುವನ್ನು ಮೂರ್ತಿ ರೂಪಕ್ಕಿಳಿಸುವ ಶಿಕ್ಷಣದ ಜೊತೆಗೆ ಮಗುವಿನಲ್ಲಿ ಸಂಸ್ಕಾರವನ್ನು ಮೂಡಿಸುವುದು ಇಂದಿನ ಶಿಕ್ಷಣದ ಮೂಲವಾಗಬೇಕು ಎಂದರು.
ಶಾಲಾ ಆಡಳಿತ ಮಂಡಳಿಯ ಸಂಚಾಲಕ ಶ್ರೀ ರವೀಂದ್ರ ಪಿ. ಅಧ್ಯಕ್ಷತೆ ವಹಿಸಿ ಮಾತನಾಡುತ್ತ ಪ್ರಾರ್ಥನೆಯ ಮಹತ್ವ, ಪರಿಣಾಮವನ್ನು ತಿಳಿಸಿ ನಾವು ತಾಳ್ಮೆಯ ಶಿಕ್ಷಣವನ್ನು ಮಗುವಿನಿಂದ ಪಡೆಯಬೇಕು ಎಂದರು. ಶಾಲಾ ಮುಖ್ಯೋಪಾಧ್ಯಾಯರಾದ ಸತೀಶ್ ಕುಮಾರ್ ರೈ ಪ್ರಸ್ತಾವನೆಗೈದರು. ವೇದಿಕೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಪೂರ್ವ ಅಧ್ಯಕ್ಷ ರವಿ ಮುಂಗ್ಲಿಮನೆ, ಪ್ರಾಥಮಿಕ ವಿಭಾಗ ಮುಖ್ಯಗುರು ರಾಮ ನಾಕ್ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ಸರಸ್ವತಿ ವಂದನೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಕೆ.ಜಿ.ವಿಭಾಗದ ಮುಖ್ಯಸ್ಥೆ ಮಮತಾ ಆರ್. ಸ್ವಾಗತಿಸಿ, ಶಿಕ್ಷಕಿ ಜ್ಯೋತಿ ವಂದಿಸಿದರು. ಶಿಕ್ಷಕಿ ಸೌಮ್ಯಕುಮಾರಿ ಮತ್ತು ಯಶೋಧ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಕಾಸರಗೋಡು ಚಿನ್ಮಯ ವಿದ್ಯಾಲಯದ ಪ್ರಾಂಶುಪಾಲ ಶ್ರೀ ಪುಷ್ಪರಾಜ್ ಇವರು ಮಗುವಿನ ಆಸಕ್ತಿ, ಸಾಮರ್ಥ್ಯಗಳ ಗುರುತಿಸುವಿಕೆ ಕೌಶಲ್ಯಾಭಿವೃದ್ಧಿ, ಮಗುವಿನ ಲಾಲನೆ-ಪೋಷಣೆ ಕುರಿತಾಗಿ ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು. ಶಾಂತಿಮಂತ್ರದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು. ಮಧ್ಯಾಹ್ನ ಪೋಷಕರಿಗೆ ಭೋಜನೆ ವ್ಯವಸ್ಥೆ ಮಾಡಲಾಗಿತ್ತು.