ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಮತ್ತು ವಿವೇಕಾನಂದ ಬಿ.ಎಡ್ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ 68 ನೇ ಗಣರಾಜ್ಯೋತ್ಸವವನ್ನು ಶಾಲಾ ಆವರಣದಲ್ಲಿ ಆಚರಿಸಲಾಯಿತು. ಭಾರತೀಯ ವಾಯು ಸೇನೆಯ ನಿವೃತ್ತ ಅಧಿಕಾರಿ ಜಾಲ್ಸೂರು ಕಾಡಮನೆ ವಸಂತ ಗೌಡ ಉರ್ವ ಮುಖ್ಯ ಅತಿಥಿಯಾಗಿ ಆಗಮಿಸಿ, ಧ್ವಜಾರೋಹಣಗೈದು ದೇಶಪ್ರೇಮವೆಂಬುದು ಕೇವಲ ಸೈನಿಕ ಮಾತ್ರವಲ್ಲ ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲೂ ಇರಬೇಕು. ದೇಶಕಟ್ಟುವ ಕೆಲಸದಲ್ಲಿ ವಿದ್ಯಾರ್ಥಿಗಳ ಪಾತ್ರ ಅತ್ಯಂತ ಮಹತ್ವವಾದುದು. ರಾಷ್ಟ್ರೀಯ ಹಬ್ಬಗಳನ್ನು ಆಚರಿಸುವುದರ ಮೂಲಕ ದೇಶಭಕ್ತಿಯ ಜಾಗೃತಿ ಮೂಡುತ್ತದೆ ಎಂದರು.
ವೇದಿಕೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಮತ್ತು ವಿವೇಕಾನಂದ ಬಿ. ಎಡ್ ಕಾಲೇಜುಗಳ ಆಡಳಿತ ಮಂಡಳಿ ಪದಾಧಿಕಾರಿಗಳು, ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಶಿಕ್ಷಕ-ಶಿಕ್ಷಕೇತರ ವೃಂದ, ವಿದ್ಯಾರ್ಥಿ ವೃಂದ ಭಾಗವಹಿಸಿದ್ದರು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಗುರುಗಳಾದ ಶ್ರೀ ಸತೀಶ್ ಕುಮಾರ್ ರೈ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಮಮತಾ ವಂದಿಸಿದರು. ಸಹಶಿಕ್ಷಕಿ ಶ್ರೀಮತಿ ಯಶೋದಾ ಕಾರ್ಯಕ್ರಮ ನಿರೂಪಿಸಿದರು.