ಕೇಂದ್ರ ಸಚಿವಾಲಯದ ವತಿಯಿಂದ ಖೇಲ್ ಭಾರತ್ ಕಾರ್ಯಕ್ರಮದ ಅಂಗವಾಗಿ ಜ. 23 ಮತ್ತು 24 ರಂದು ಬೆಳಗಾಂನಲ್ಲಿ ನಡೆದ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ 14ರ ವಯೋಮಾನ ಬಾಲಕರ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸಿದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಯಾದ ಹೃತಿಕ್ ಎಂ. (ಶ್ರೀ ಮೋನಪ್ಪ ಎಂ. ಮತ್ತು ಶ್ರೀಮತಿ ಹರಿಣಾಕ್ಷಿ ದಂಪತಿ ಪುತ್ರ) ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದು ಫೆಬ್ರವರಿ 1 ರಿಂದ 5 ರವರೆಗೆ ಚೆನ್ನೈಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆಂದು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಕುಮಾರ್ ರೈ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.