ದಿನಾಂಕ 7-2-2017 ರಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ಇಲ್ಲಿ ರಾಷ್ಟ್ರೀಯ ರೂಬೆಲ್ಲಾ ಮತ್ತು ದಡಾರ ಲಸಿಕಾ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಆರೋಗ್ಯ ಸಹಾಯಕಿ ಅನುರಾಧ ಹಾಗೂ ಆಶಾ ಕಾರ್ಯಕರ್ತೆಯರು ಮತ್ತು ಸ್ವಯಂಸೇವಕರ ಸಹಕಾರದಿಂದ 2 ದಿನಗಳ ಕಾಲ ಲಸಿಕಾ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ 15 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಲಸಿಕೆ ನೀಡಲಾಯಿತು.
ವಿವೇಕಾನಂದ ಆಂಗ್ಲ ಮಾಧ್ಯಮದ ಮುಖ್ಯ ಶಿಕ್ಷಕರಾದ ಸತೀಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಥಮಿಕ ವಿಭಾಗದ ಮುಖ್ಯ ಗುರು ರಾಮ ನಾಯ್ಕ್, ಕೆ.ಜಿ.ವಿಭಾಗದ ಮುಖ್ಯಸ್ಥೆ ಮಮತಾ ಆರ್. ಮತ್ತು ಶಾಲಾ ಶಿಕ್ಷಕ-ಶಿಕ್ಷಕೇತರ ವೃಂದದವರು ಸಹಕರಿಸಿದರು.