ಜ್ಞಾನ-ವಿಜ್ಞಾನ ಸಹಿತವಾದ ಶಿಕ್ಷಣದೊಡನೆ ಸಂಸ್ಕೃತಿ ಹಾಗೂ ತಂತ್ರಜ್ಞಾನವೂ ಸೇರಿಕೊಂಡಾಗ ಶಿಕ್ಷಣದಲ್ಲಿ ಪ್ರಗತಿ ಸಾಧ್ಯ. ತಂತ್ರಜ್ಞಾನದ ಬಳಕೆ ಇಂದಿನ ಶಿಕ್ಷಣದ ಅವಿಭಾಜ್ಯ ಅಂಗ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಟ್ಲ ಜಿಲ್ಲಾ ಪ್ರಮುಖ್ ಶ್ರೀ ನಾರಾಯಣ ಶೆಟ್ಟಿ ನುಡಿದರು. ಅವರು ದಿನಾಂಕ 18.08.2017 ರಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಉನ್ನತೀಕರಿಸಿದ “ವಿವೇಕ” ಗಣಕಯಂತ್ರ ಪ್ರಯೋಗಾಲಯವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಗಣಕಯಂತ್ರ ವಿಭಾಗ ಮುಖ್ಯಸ್ಥ ಶ್ರೀ ಮಹೇಶ್ ಪ್ರಸನ್ನ ಮತ್ತು ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಡಾ| ಮುರಳೀಕೃಷ್ಣ ರೈ ಇವರು ಗಣಕಯಂತ್ರದ ಅಗತ್ಯತೆ ಹಾಗೂ ಅದರ ಸಮರ್ಪಕ ಉಪಯೋಗದ ಕುರಿತು ತಿಳಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ| ಕೆ.ಎಂ. ಕೃಷ್ಣ ಭಟ್ ಮಾತನಾಡುತ್ತಾ, ಪ್ರಯೋಗಾಲಯವನ್ನು ಉನ್ನತೀಕರಿಸಲು ಸಹಕರಿಸಿದ ಶಾಲಾ ಶಿಕ್ಷಕ-ರಕ್ಷಕ ಸಂಘಕ್ಕೆ ಕೃತಜ್ಞತೆ ಸಲ್ಲಿಸಿದರು.
ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ವೆಂಕಟೇಶ್ವರ ಅಮೈ, ವಿವೇಕಾನಂದ ವಿದ್ಯಾವರ್ಧಕ ಸಂಘದ ಹಿರಿಯರಾದ ಶ್ರೀ ಎ.ವಿ.ನಾರಾಯಣ, ಶಾಲಾ ಆಡಳಿತ ಮಂಡಳಿ ಸದಸ್ಯ ಶ್ರೀ ಬಿರ್ಮಣ್ಣ ಗೌಡ, ವಿವೇಕಾನಂದ ವಿದ್ಯಾವರ್ಧಕ ಸಂಘದ ಪ್ರತಿನಿಧಿ ಶ್ರೀ ಶಿವಪ್ರಸಾದ್, ನರೇಂದ್ರ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷೆ ಶ್ರೀಮತಿ ರೂಪಲೇಖಾ, ನರೇಂದ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಅನಿಲ್ ಕುಮಾರ್, ವಿವೇಕಾನಂದ ವಿದ್ಯಾವರ್ಧಕ ಸಂಘದ ಖಜಾಂಜಿ ಸುರೇಂದ್ರ ಕಿಣಿ ಉಪಸ್ಥಿತರಿದ್ದರು.
ಶಾಲಾ ಆಡಳಿತ ಮಂಡಳಿ ಸಂಚಾಲಕ ಮುರಳೀಧರ.ಕೆ ಪ್ರಾಸ್ತಾವಿಕ ಮಾತನ್ನಾಡಿದರು. ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಮುಖ್ಯೋಪಾಧ್ಯಾಯರಾದ ಸತೀಶ್ ಕುಮಾರ್ ರೈ ಸ್ವಾಗತಿಸಿ, ನರೇಂದ್ರ ಪದವಿಪೂರ್ವ ಕಾಲೇಜಿನ ಗಣಕಯಂತ್ರ ಉಪನ್ಯಾಸಕಿ ನಾಗಶ್ರೀ ವಂದಿಸಿದರು. ಸಹಶಿಕ್ಷಕಿ ಕವಿತಾ ಸತೀಶ್ ಕಾರ್ಯಕ್ರಮ ನಿರೂಪಿಸಿದರು.ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿ, ರಕ್ಷಕ-ಶಿಕ್ಷಕ ಸಂಘದ ಸದಸ್ಯರು, ಶಿಕ್ಷಕ-ಶಿಕ್ಷಕೇತರ ಹಾಗೂ ವಿದ್ಯಾರ್ಥಿ ವೃಂದ ಭಾಗವಹಿಸಿದ್ದರು.