ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಇದರ ಆಶ್ರಯಲ್ಲಿ ದಿನಾಂಕ 28-8-2018 ರಂದು ಶಾರದಾ ವಿದ್ಯಾ ಗಣಪತಿ ಪ್ರೌಢ ಶಾಲೆ, ಪುಣ್ಯಕೋಟಿ ನಗರ, ಕೈರಂಗಳ, ಬಂಟ್ವಾಳ ಇಲ್ಲಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯು ನಡೆಯಿತು. ರಿದಮಿಕ್ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 8 ನೇ ತರಗತಿ ವಿದ್ಯಾರ್ಥಿಯಾದ ಮನ್ನಿತ್ ಭಾಗವಹಿಸಿ ಪ್ರಥಮ ಸ್ಥಾನ ಪಡೆದು, ಸೆಪ್ಟೆಂಬರ್ 15 ಮತ್ತು 16 ರಂದು ಕಾರ್ಕಳದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದುಕೊಂಡಿದ್ದಾನೆ ಎಂದು ಶಾಲಾ ಮುಖ್ಯೋಪಾಧ್ಯಾಯರು ತಿಳಿಸಿರುತ್ತಾರೆ.