QR Code Business Card

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ 2018-19

ದಿನಾಂಕ 6-12-2018 ರಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಇದರ 2018-19 ರ ಸಾಲಿನ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ವೆಂಕಟೇಶ್ವರ ಅಮೈ ಸಭಾಧ್ಯಕ್ಷತೆ ವಹಿಸಿ ಮಾತನಾಡಿದರು. ಮುಳಿಯ ಜುವೆಲ್ಸ್‌ನ ಮಾಲಕ ಶ್ರೀ ಕೇಶವಪ್ರಸಾದ್ ಮುಳಿಯ ಕಾರ್ಯಕ್ರಮ ಉದ್ಘಾಟಿಸಿವಿದ್ಯಾರ್ಥಿ ಜೀವನದಲ್ಲಿ ದೈಹಿಕ ಕ್ಷಮತೆ, ಒಳ್ಳೆಯ ಆರೋಗ್ಯ, ಸಂಸ್ಕಾರವನ್ನು ಪಡೆಯಲು ಕ್ರೀಡೆ ಬಹಳ ಮುಖ್ಯ. ಕ್ರೀಡೆಯುಸಹಕಾರ, ಸಹಬಾಳ್ವೆ, ಆತ್ಮ ವಿಶ್ವಾಸ, ಬದುಕಿಗೆ ಸ್ಪೂರ್ತಿ ನೀಡಬಲ್ಲದ್ದು ಮತ್ತು ಸಾಧನೆಯ ಉತ್ತುಂಗಕ್ಕೆ ಏರಿಸುವ ಒಂದು ಪ್ರಮುಖ ಘಟ್ಟ ಎಂದು ಮಕ್ಕಳಿಗೆ ಹುರುಪನ್ನು ನೀಡಿದರು. ಪುತ್ತೂರು ನಗರ ಠಾಣೆ ಸರ್ಕಲ್ ಇನ್‌ಸ್ಪೆಕ್ಟ್ಟರ್ ಶ್ರೀ ತಿಮ್ಮಪ್ಪ ನಾಕ್‌ಮುಖ್ಯ ಅತಿಥಿಯಾಗಿ ಆಗಮಿಸಿ, ಧ್ವಜವಂದನೆ ಸ್ವೀಕರಿಸಿ ಶುಭ ಹಾರೈಸಿದರು.

ತಿಲಕ್, ಸುಭಾಷ್, ಪ್ರತಾಪ್, ಶಿವಾಜಿ ಹೀಗೆ ವಿದ್ಯಾರ್ಥಿಗಳನ್ನೊಳಗೊಂಡ ನಾಲ್ಕು ತಂಡಗಳು ಮತ್ತು ಸ್ಕೌಟ್ಸ್ ಮತ್ತು ಗೈಡ್ಸ್‌ಗಳ ತಂಡ ಶಾಲೆಯ ಕ್ರೀಡಾಂಗಣದಲ್ಲಿ ಆಕರ್ಷಕ ಪಥಸಂಚಲನವನ್ನು ನಡೆಸಿಕೊಟ್ಟರು. ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳ ತಂಡ ಕ್ರೀಡಾಜ್ಯೋತಿಯನ್ನು ಕ್ರೀಡಾಂಗಣ ಒಂದು ಸುತ್ತು ಪ್ರದಕ್ಷಿಣೆ ಹಾಕುತ್ತಾ ಮುಖ್ಯ ಅತಿಥಿಯವರಿಗೆ ಹಸ್ತಾಂತರಿಸಿದರು. ತದನಂತರ ಮುಖ್ಯ ಅತಿಥಿಗಳು ದೀಪ ಬೆಳಗಿಸುವುದರ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಬಳಿಕ ಕ್ರೀಡಾಜ್ಯೋತಿಯನ್ನು ಕ್ರೀಡಾಂಗಣದ ಮತ್ತೊಂದು ಭಾಗದ ಪೀಠದಲ್ಲಿ ಉರಿಸಿಡಲಾಯಿತು. ಶಾಲಾ ವಿದ್ಯಾರ್ಥಿಗಳಿಂದ ಯೋಗ ವ್ಯಾಯಾಮ ಹಾಗೂ ಅತ್ಯಕರ್ಷಕ ಕವಾಯತು ಜರಗಿತು.ಈ ಸಂದರ್ಭದಲ್ಲಿ ಪೂರ್ವ ಪ್ರಾಥಮಿಕ ಹಾಗೂ ಕಿರಿಯ ಪ್ರಾಥಮಿಕ ವಿಭಾಗದ ಪುಟಾಣಿಗಳು ಆಗಸಕ್ಕೆ ಬಲೂನ್‌ಗಳನ್ನು ಹಾರಿಸಿ ಸಂಭ್ರಮಿಸಿದರು.

ವೇದಿಕೆಯಲ್ಲಿ ಶಾಲಾ ಸಂಚಾಲಕರಾದ ಮುರಳೀಧರ್.ಕೆ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಡಾ.ಶಶಿಧರ್ ಕಜೆ ಮತ್ತು ಪದಾಧಿಕಾರಿಗಳು, ಶಾಲಾ ಆಡಳಿತ ಮಂಡಳಿ ಸದಸ್ಯರು, ಬಿ.ಎಡ್. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ದಿನೇಶ್‌ಚಂದ್ರ, ನರೇಂದ್ರ ಪಿ.ಯು.ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಮತ್ತು ಪೋಷಕ ವೃಂದ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಕುಮಾರ್ ರೈ ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನು ಸ್ವಾಗತಿಸಿದರು. ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸಂಧ್ಯಾ ವಂದಿಸಿ, ಶಿಕ್ಷಕಿಯರಾದ ಪ್ರತಿಮಾ ಮತ್ತು ಶಾಂತಿ ಕಾರ್ಯಕ್ರಮ ನಿರೂಪಿಸಿದರು.