QR Code Business Card

ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಮತ್ತು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17 ಮತ್ತು 18 ರಂದು ನಡೆದ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ವಿವೇಕ ಕ್ರೀಡಾ ಸಂಭ್ರಮ 2019 ಈ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲಮಾಧ್ಯಮ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ,ದ್ವಿತೀಯ ಸ್ಥಾನ ಪಡೆದು 13 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಪ್ರಾಥಮಿಕ ವಿಭಾಗದ ಬಾಲಕರ ವಿಭಾಗದಲ್ಲಿ ಆಶ್ರಯ್ ಎಸ್ 600 ಮೀಟರ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಬಾಲಕಿಯರ ವಿಭಾಗದಲ್ಲಿ ಮಾನ್ಯ ಎತ್ತರ ಜಿಗಿತದಲ್ಲಿ ಪ್ರಥಮಸ್ಥಾನ, ವಂಶಿ ಬಿ.ಕೆ 100 ಮೀಟರ್ ಪ್ರಥಮ, 200ಮೀಟರ್ ಪ್ರಥಮ, 80 ಮೀಟರ್ ಹರ್ಡಲ್ಸ್ ನಲ್ಲಿ ಪ್ರಥಮ ಸ್ಥಾನ, 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಅನಘ ಕೆಎನ್ 100 ಮೀಟರ್ ಪ್ರಥಮ, 200ಮೀಟರ್ ಪ್ರಥಮ, 400 ಮೀಟರ್ ಪ್ರಥಮ, ಅನಘ ಕೆಎ ಉದ್ದ ಜಿಗಿತ ಪ್ರಥಮ, ಎತ್ತರ ಜಿಗಿತ ಪ್ರಥಮ, 80 ಮೀಟರ್ ಹರ್ಡಲ್ಸ್ ನಲ್ಲಿ ಪ್ರಥಮ, ಪ್ರೌಢಶಾಲಾ ವಿಭಾಗದ ಬಾಲಕರಲ್ಲಿ ಚಿರಾಗ್ ಎಂ ರೈ ಚಕ್ರ ಎಸೆತ ಪ್ರಥಮ, ಚಿರಾಯು ಎಂ ರೈ ಗುಂಡು ಎಸೆತದಲ್ಲಿ ದ್ವಿತೀಯ, ಹ್ಯಾಮರ್ ಎಸೆತದಲ್ಲಿ ದ್ವಿತೀಯ, ಆಕಾಶ್ ಕೆ.ಆರ್ ಗುಂಡು ಎಸೆತದಲ್ಲಿ ಪ್ರಥಮ, ಹ್ಯಾಮರ್ ಎಸೆತದಲ್ಲಿ ತೃತೀಯ , ವನ್ರ್ ಬಾಕ್ ಜಾವೆಲಿನ್ ಎಸೆತದಲ್ಲಿ ಪ್ರಥಮ, ರಕ್ಷಿತ್ ರೈ ಜಾವೆಲಿನ್ ಎಸೆತದಲ್ಲಿ ದ್ವಿತೀಯ, ಬಾಲಕಿಯರ ವಿಭಾಗದಲ್ಲಿ ರಿಯಾ ಶೆಟ್ಟಿ ಹ್ಯಾಮರ್ ಎಸೆತದಲ್ಲಿ ಪ್ರಥಮ, ಪೂಜಶ್ರೀ 200ಮೀಟರ್ ಪ್ರಥಮ, 100ಮೀಟರ್ದ್ವಿತೀಯ,ಚರಿತ ಬಿ ಆರ್ 100 ಮೀಟರ್ಹರ್ಡಲ್ಸ್ ನಲ್ಲಿ ದ್ವಿತೀಯಸ್ಥಾನ ಪಡೆದುಕೊಂಡಿರುತ್ತಾರೆ.

ಕ್ರೀಡಾಕೂಟದ ಪ್ರಾಥಮಿಕ ವಿಭಾಗದ ಬಾಲಕಿಯರ ವಿಭಾಗದಲ್ಲಿ ವಂಶಿ ಬಿ.ಕೆ ವೈಯುಕ್ತಿಕ ಚಾಂಪಿಯನ್ ಪ್ರಶಸ್ತಿಯನ್ನು, 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಅನಘ ಕೆಎನ್ ವೈಯಕ್ತಿಕ ಚಾಂಪಿಯನ್,  ಆನಘ ಕೆ ಎ ಎತ್ತರ ಜಿಗಿತದಲ್ಲಿ ಮತ್ತು ಉದ್ದ ಜಿಗಿತ ಸ್ಪರ್ಧೆಯಲ್ಲಿ ಹೊಸ ನೂತನ ಕೂಟ ದಾಖಲೆಯೊಂದಿಗೆ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿಯನ್ನು ಪಡೆದುಕೊಂಡೆದ್ದುಒಟ್ಟು 13 ವಿದ್ಯಾರ್ಥಿಗಳು 30 ಮತ್ತು 31ರಂದು ಮಂಗಳ ಕ್ರೀಡಾಂಗಣ ಮಂಗಳೂರಿನಲ್ಲಿ ನಡೆಯುವ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಕುಮಾರ್ ರೈ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.