ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 1-11-2019 ನೇ ಶುಕ್ರವಾರ ಶಾಲೆಯ ಯಾದವಶ್ರೀ ಸಭಾಂಗಣದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಪುತ್ತೂರು ಮತ್ತು ಇನ್ನರ್ ವೀಲ್ ಕ್ಲಬ್, ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಗೈಯುವುದರೊಂದಿಗೆ ವಿಜೃಂಭಣೆಯಿಂದ ನಡೆಯಿತು. ಕನ್ನಡ ರಾಜ್ಯೋತ್ಸವವು ಎಲ್ಲರಲ್ಲಿ ಒಗ್ಗಟ್ಟನ್ನು ತರಲಿ. ಕನ್ನಡ ಭಾಷಾಭಿಮಾನವು ವಿದ್ಯಾರ್ಥಿಗಳಲ್ಲಿ ಹಾಗೂ ನಮ್ಮೆಲ್ಲರಲ್ಲಿಯೂ ಇನ್ನೂ ಹೆಚ್ಚು ಬೆಳೆಯಲಿ. ಶಾಲೆಯು ಉನ್ನತೋನ್ನತ ಅಭಿವೃದ್ಧಿಯನ್ನು ಹೊಂದಲಿ ಎಂದು ಪುತ್ತೂರಿನ ಇನ್ನರ್ ವೀಲ್ಕ್ಲಬ್ನ ಅಧ್ಯಕ್ಷೆ ಶ್ರೀಮತಿ ಸಹನಾ ಭವಿನ್ ಹಾರೈಸಿದರು.
ವಿದ್ಯಾರ್ಥಿಗಳು ನಾಡಗೀತೆಯನ್ನು ಹಾಡಿದರು. ಶಿಕ್ಷಕಿ ಶ್ರೀಮತಿ ಪುಷ್ಪಲತಾ ಬಿ.ಕೆ. ಇವರು ಕನ್ನಡ ರಾಜ್ಯೋತ್ಸವ ಹಾಗೂ ಅಕ್ಷರದ ಮಹತ್ವವನ್ನು ಹಾಡಿನ ಸಾಲಿನೊಂದಿಗೆ ವಿವರಿಸಿ ವಿದ್ಯಾರ್ಥಿಗಳಿಂದ ಜಯಕಾರ ಹೇಳಿಸಿದರು. ನಮ್ಮ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಶಿವಪ್ರಕಾಶ್ ಅಧ್ಯಕ್ಷೀಯ ನುಡಿಗಳನ್ನು ನುಡಿದು, ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ರಾಜ್ಯಮಟ್ಟದ ಕ್ರೀಡೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳನ್ನು ಗೌರವಿಸಿದರು.
ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿ ಸದಸ್ಯೆ ಶ್ರೀಮತಿ ವಸಂತಿ, ಇನ್ನರ್ ವೀಲ್ಕ್ಲಬ್ನ ಕಾರ್ಯದರ್ಶಿ ಶ್ರೀಮತಿ ವಿಜಯಲಕ್ಷ್ಮೀ ಶೆಣೈ, ಕೋಶಾಧಿಕಾರಿ ಶ್ರೀಮತಿ ಶಂಕರಿ, ಇನ್ನರ್ ವೀಲ್ಕ್ಲಬ್ನ ಸದಸ್ಯರುಗಳಾದ ಶ್ರೀಮತಿ ಪುಷ್ಪ ಕೆದಿಲಾಯ, ಶ್ರೀಮತಿ ಆಶಾ ನಾಯಕ್, ಶ್ರೀಮತಿ ಶೋಭಾ ಕೊಳತ್ತಾಯ, ಶ್ರೀಮತಿ ನಿರ್ಮಲಾ ಉಪಸ್ಥಿತರಿದ್ದರು. ಶ್ರೀಮತಿ ಆಶಾ.ಕೆ ಸ್ವಾಗತಿಸಿ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸಂಧ್ಯಾ ಕೆ. ವಂದಿಸಿದರು. ಶ್ರೀಮತಿ ಸಾಯಿಗೀತಾ ಎಸ್. ರಾವ್ ಪ್ರಾಸ್ತಾವಿಕ ಮಾತುಗಳನ್ನಾಡಿ ಕಾರ್ಯಕ್ರಮ ನಿರೂಪಿಸಿದರು.