QR Code Business Card

ಗಣರಾಜ್ಯೋತ್ಸವ ಆಚರಣೆ

ದಿನಾಂಕ 26-1-2020 ನೇ ರವಿವಾರ, ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ 71 ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ವಿವೇಕಾನಂದ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆಗಳು, ನರೇಂದ್ರ ಪದವಿಪೂರ್ವಕಾಲೇಜು, ವಿವೇಕಾನಂದ ಬಿ.ಎಡ್‌. ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಆಚರಿಸಲಾಯಿತು.

ಧ್ವಜಾರೋಹಣವನ್ನು ನಿವೃತ್ತ ಸೇನಾಧಿಕಾರಿ ಕರ್ನಲ್ ಡಿ. ಜಿ. ಭಟ್‌ ಇವರು ನೆರವೇರಿಸಿ, ಮಾತನಾಡಿದರು. ಮುಖ್ಯ ಅತಿಥಿಯಾಗಿ ನಿವೃತ್ತ ಕೆ. ಎಸ್. ಆರ್. ಪಿ. ಕಮಾಂಡೆಂಟ್ ಶ್ರೀ ರಾಮದಾಸ್‌ ಆಗಮಿಸಿ, ವಿದ್ಯಾರ್ಥಿಗಳಿಗೆ ಗಣರಾಜ್ಯೋತ್ಸವದ ಸಂದೇಶವನ್ನು ಸಾರಿದರು. ವಿವೇಕಾನಂದ ಆಂಗ್ಲಮಾಧ್ಯಮ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ. ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಸಮಾರಂಭದ ಪ್ರಾರಂಭದಲ್ಲಿ ವಿವೇಕಾನಂದ ಆಂಗ್ಲ ಮತ್ತುಕನ್ನಡ ಮಾಧ್ಯಮ ಶಾಲೆಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಆಕರ್ಷಕ ಪಥಸಂಚಲನ ಹಾಗೂ ಸಾಮೂಹಿಕ ಸಮತ ನಡೆಯಿತು.

ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆಗಳು, ನರೇಂದ್ರ ಪದವಿಪೂರ್ವ ಕಾಲೇಜು, ವಿವೇಕಾನಂದ ಬಿ.ಎಡ್‌.ಕಾಲೇಜು ಇದರ ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು, ಸದಸ್ಯರು, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರು ಮತ್ತು ಸದಸ್ಯರು, ಪೋಷಕರು, ಮುಖ್ಯೋಪಾಧ್ಯಾಯರುಗಳು, ಪ್ರಾಂಶುಪಾಲರು, ಶಿಕ್ಷಕ-ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿ ವೃಂದ ಪಾಲ್ಗೊಂಡಿದ್ದರು.

ದೈಹಿಕ ಶಿಕ್ಷಣ ಶಿಕ್ಷಕ ದೀಪಕ್‌ ಅವರು ಘೋಷಣೆಗಳನ್ನು ಹಾಗೂ ಸಾಮೂಹಿಕ ಸಮತ ನೆರವೇರಿಸಿ ಕೊಟ್ಟರು. ನರೇಂದ್ರ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶಾನ್‌ಬೊಗ್‌ ಸ್ವಾಗತಿಸಿ, ವಿವೇಕಾನಂದ ಕನ್ನಡಮಾಧ್ಯಮ ಶಾಲೆಯ ಆಡಳಿತ ಮಂಡಳಿ ಸಂಚಾಲಕರಾದ ಶ್ರೀ ರವಿನಾರಾಯಣ ಪ್ರಾಸ್ತಾವಿಕವಾಗಿ ಮಾತನಾಡಿ, ವಿವೇಕಾನಂದ ಬಿ.ಎಡ್‌. ಕಾಲೇಜಿನ ಪ್ರಾಂಶುಪಾಲೆ ಡಾ.ಶೋಭಿತ ಸತೀಶ್ ವಂದಿಸಿದರು.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ವಿಶಾಲಾಕ್ಷಿ ಹಾಗೂ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ನಾಯಕ ಸಾತ್ವಿಕ್ ಮತ್ತು ಶಾಲಾ ದೈಹಿಕ ಶಿಕ್ಷಣ ಶಿಕ್ಷಕರು ಸಹಕರಿಸಿದರು.