ದೈನಂದಿನ ಜೀವನದಲ್ಲಿ ಬೇಕಾಗುವ ಶಿಕ್ಷಣವನ್ನು ಶಾಲಾ ಹಂತದಲ್ಲಿ ನೀಡುವುದು ನಮ್ಮ ಜವಾಬ್ದಾರಿ. ಆದರೆ ಅದರ ಪರಿಣಾಮಕಾರಿ ಅನುಷ್ಠಾನಕ್ಕೆ ಹಾಗೂ ಮೌಲ್ಯಾಧಾರಿತ ಶಿಕ್ಷಣ ನೀಡುವಲ್ಲಿ ಪೋಷಕರ ಸಹಕಾರ ಅಗತ್ಯ ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಸತೀಶ್ ಕುಮಾರ್ ರೈ ಇವರು ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಸಭೆಯು ಶಾಲಾ ಸಭಾಂಗಣದಲ್ಲಿ ಅಗಸ್ಟ್ 5 ರಂದು ನಡೆಯಿತು.
ಶಿಕ್ಷಕ – ರಕ್ಷಕ ಸಂಘ ಅಧ್ಯಕ್ಷ ರವಿ ಮುಂಗ್ಲಿಮನೆ ಸಾಂಧಾರ್ಭಿಕ ಮಾತುಗಳನ್ನಾಡಿದರು. ವೇದಿಕೆಯಲ್ಲಿ ರಾಮನಾಕ್ ಮುಖ್ಯೋಪಾಧ್ಯಾಯರು ಪ್ರಾಥಮಿಕ ವಿಭಾಗ, ಮಮತಾ ಬಿ. ಕೆ.ಜಿ.ವಿಭಾಗದ ಮುಖ್ಯಸ್ಥೆ ಮತ್ತು ತರಗತಿ ಶಿಕ್ಷಕರು ಉಪಸ್ಥಿತರಿದ್ದರು. ಶಿಕ್ಷಕಿ ಮಮತಾ ಪೈ ಸ್ವಾಗತಿಸಿ, ಶಿಕ್ಷಕಿ ವಿದ್ಯಾರತ್ನ ವಂದಿಸಿ, ಶಿಕ್ಷಕಿ ಶಾಂತಿ ಕಾರ್ಯಕ್ರಮ ನಿರೂಪಿಸಿದರು.