ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ, ಇಲ್ಲಿನ 10 ನೇ ತರಗತಿ ವಿದ್ಯಾರ್ಥಿನಿ ದೇವಿ ಮುರಳಿಕೃಷ್ಣ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಏರ್ಪಡಿಸಿದ ಜಿಲ್ಲಾ ಮಟ್ಟದ ವಿಜ್ಞಾನ ವಿಚಾರ ಗೋಷ್ಠಿ ‘Harnessing of light’ ಎಂಬ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದಾಳೆ. ಮತ್ತು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ. ಇವಳಿಗೆ ಶಿಕ್ಷಕಿ ಸಿಂಧು ಮತ್ತು ಶಾರದ ಶೆಟ್ಟಿ ಮಾರ್ಗದರ್ಶನ ನೀಡಿದ್ದಾರೆಂದು ಶಾಲಾ ಮುಖ್ಯಗುರುಗಳ ಪ್ರಕಟಣೆ ತಿಳಿಸಿದೆ.