ಹೊಸ ಪೀಳಿಗೆಯ ಮಕ್ಕಳು ಆಧುನಿಕ ತಂತ್ರಜ್ಞಾನವನ್ನು ಶೀಘ್ರವಾಗಿ ಸ್ವೀಕರಿಸುತ್ತಾರೆ. ತಂದೆ-ತಾಯಿಗಳ ನಂತರ ಪ್ರಾಥಮಿಕ ಹಂತದಲ್ಲಿ ಶಿಕ್ಷಕರು ಉತ್ತಮ ಬೋಧನೆ ನೀಡಲು ಕಾರ್ಯಾಗಾರ ಅವಶ್ಯಕ ಎಂದು ವಿವೇಕಾನಂದ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯೆ ಶ್ರೀಮತಿ ಶೋಭಾ ಕೊಳತ್ತಾಯ ಹೇಳಿದರು.
ಅವರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಕಾರ್ಯಾಗಾರದ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಶಿಕ್ಷಣ ಪರಿವೀಕ್ಷಕ ರಘುರಾಜ ಉಬರಡ್ಕ ಪ್ರಸ್ಥಾವನೆಗೈದರು.
ವೇದಿಕೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪ್ರೌಢವಿಭಾಗದ ಮುಖ್ಯಗುರು ಶ್ರೀಮತಿ ಆಶಾ ಬೆಳ್ಳಾರೆ, ಪ್ರಾಥಮಿಕ ವಿಭಾಗದ ಶ್ರೀಮತಿ ನಳಿನಿ ವಾಗ್ಲೆ, ಪುಣಚ ಶ್ರೀದೇವಿ ಪ್ರಾಥಮಿಕ ಶಾಲೆಯ ಲೋಕೇಶ್, ಕಲ್ಲಡ್ಕ ಶ್ರೀರಾಮ ಶಾಲೆಯ ರವಿರಾಜ ಕಣಂತೂರು ಉಪಸ್ಥಿತರಿದ್ದರು. ವಿವೇಕಾನಂದ ಪ್ರಾಥಮಿಕ ವಿಭಾಗದ ಮುಖ್ಯ ಗುರು ರಾಮನಾಯ್ಕ ಕಾರ್ಯಕ್ರಮ ನಿರ್ವಹಿಸಿದರು.