ಶ್ರೀರಾಮ ಭಟ್ ಮುರ್ಗಜೆ ಮತ್ತು ಮಲ್ಲಿಕಾ ದಂಪತಿ ಪುತ್ರ, ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿ ಸ್ವಸ್ತಿಕ್ ಪದ್ಮ ಇವರು ಕರ್ನಾಟಕ ಸರಕಾರ, ಬಾಲಭವನ ಸೊಸೈಟಿ, ಕಬ್ಬನ್ ಪಾರ್ಕ್ ಬೆಂಗಳೂರು ಮತ್ತು ಜಿಲ್ಲಾ ಬಾಲಭವನ ಸಮಿತಿ ಮೈಸೂರು ಇವರು ನೀಡುವ 2015-16 ನೇ ಸಾಲಿನ ರಾಜ್ಯ ಮಟ್ಟದ ಕಲಾಶ್ರೀ ಪ್ರಶಸ್ತಿಯನ್ನು ಪಡೆದಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ಇವರ ಅಪ್ರತಿಮ ಪ್ರತಿಭೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ ಎಂದು ಶಾಲಾಮುಖ್ಯೋಪಾಧಾಯರಾದ ಶ್ರೀ ಸತೀಶ್‌ಕುಮಾರ್‌ರೈ ತಿಳಿಸಿರುತ್ತಾರೆ.