QR Code Business Card

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ

2015-16 ನೇ ಸಾಲಿನ ಎಸ್.ಎಸ್.ಎಲ್.ಸಿ ಅಂತಿಮ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯೊಂದಿಗೆ ಶಾಲೆಗೆ ಉತ್ತಮ ಹೆಸರು ತಂದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ದಿನಾಂಕ 4-6-2016 ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.

P_20160604_153745

IMG_20160604_152348

ಪುತ್ತೂರು ಪ್ರಗತಿ ಆಸ್ಪತ್ರೆಯ ಡಾ. ಸುಧಾರಾವ್ ಮುಖ್ಯ ಅತಿಥಿಗಳಾಗಿ ಆಗಮಿಸಿ ಶುಭ ಹಾರೈಸಿದರು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಡಾ.ಕೆ.ಎಂ.ಕೃಷ್ಣ ಭಟ್ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ 625 ರಲ್ಲಿ 622 ಅಂಕ ಗಳಿಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಕು.ಪ್ರಣಮ್ಯಳನ್ನು ವಿಶೇಷವಾಗಿ ಅಭಿನಂದಿಸಲಾಯಿತು.

ವೇದಿಕೆಯಲ್ಲಿ ಶಾಲಾ ಸಂಚಾಲಕ ಶ್ರೀ ರವೀಂದ್ರ ಪಿ., ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಪ್ರೋ.ವಿ.ಜಿ.ಭಟ್ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಸತೀಶ್‌ಕುಮಾರ್‌ರೈ ಪ್ರಸ್ತಾವನೆಗೈದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶ್ರೀಮತಿ ಶಾರದಾ ಶೆಟ್ಟಿ ಸ್ವಾಗತಿಸಿ, ಶ್ರೀಮತಿ ಶಾಂತಿ ಎಸ್. ವಂದಿಸಿದರು. ಶ್ರೀಮತಿ ಅನುರಾಧ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಸದಸ್ಯರು, ಪೋಷಕರು, ಶಾಲಾ ಶಿಕ್ಷಕ ವೃಂದದವರು ಭಾಗವಹಿಸಿದ್ದರು. ಸಮಾರಂಭದ ಬಳಿಕ ಉಪಾಹಾರ ವ್ಯವಸ್ಥೆ ಮಾಡಲಾಯಿತು.