ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿ ನಾಯಕ-ನಾಯಕಿಯರ ಚುನಾವಣೆಯು ದಿನಾಂಕ 15-06-2016 ರಂದು ಶಾಲಾ ಆವರಣದಲ್ಲಿ ನಡೆಯಿತು.
ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯನ್ನು ಮಕ್ಕಳಲ್ಲಿ ತಿಳಿಸುವ ಉದ್ದೇಶದಿಂದ ಸಾರ್ವತ್ರಿಕ ಚುನಾವಣೆ ಪದ್ಧತಿಯಂತೆ ಶಾಲೆಯಲ್ಲಿ ಗುಪ್ತ ಮತದಾನ ಪದ್ಧತಿಯನ್ನು ಅನುಸರಿಸಲಾಯಿತು. ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸರತಿ ಸಾಲಿನಲ್ಲಿ ಬಂದು ತಮ್ಮ ನೆಚ್ಚಿನ ನಾಯಕ-ನಾಯಕಿಯರಿಗೆ ಮತ ಚಲಾಯಿಸಿದರು.
ಶಾಲಾ ಮುಖ್ಯೋಪಾಧ್ಯಾಯರು ಮಾರ್ಗದರ್ಶನ ನೀಡಿದರು. ಮುಖ್ಯ ಚುನಾವಣಾಧಿಕಾರಿಯಾಗಿ ಹಿರಿಯ ಶಿಕ್ಷಕಿ ಮೋಹಿನಿ ಕರ್ತವ್ಯ ನಿರ್ವಹಿಸಿದರು ಹಾಗೂ ಶಾಲಾ ಶಿಕ್ಷಕ-ಶಿಕ್ಷಕಿಯರು ಸಹಕರಿಸಿದರು.