ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು, ಇದರ ೪ನೇ ತರಗತಿ ವಿದ್ಯಾರ್ಥಿಗಳ ವರ್ಷದ ಮೊದಲ ಪೋಷಕರ ಸಭೆಯು ದಿನಾಂಕ 5-7-2016 ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.
ವಿವೇಕಾನಂದ ಬಿ.ಎಡ್ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಶೋಭಿತಾ ಪೋಷಕರನ್ನುದ್ದೇಶಿಸಿ ಮಾತನಾಡಿ ಮಗುವಿನ ಆಸಕ್ತಿ, ಅಭಿರುಚಿಗೆ ತಕ್ಕಂತೆ ಸಂಸ್ಕಾರಯುತ ಶಿಕ್ಷಣ ಕೊಡಬೇಕಾಗಿರುವುದು ನಮ್ಮ ಕರ್ತವ್ಯ. ತಮ್ಮಲ್ಲಿರುವ, ಸಂಪತ್ತು, ಕಾರು, ಬಂಗಲೆ ಐಷರಾಮಿ ವಸ್ತುಗಳನ್ನು ಮಕ್ಕಳಿಂದ ದೂರವಿರಿಸಿ, ಪ್ರೀತಿಯೆಂಬ ಸಂಪತ್ತಿನಿಂದ ಬದುಕುವ ಪಾಠ ಕಲಿಸಬೇಕು ಎಂದರು. ವೇದಿಕೆಯಲ್ಲಿ ಆಡಳಿತ ಮಂಡಳಿ ಸದಸ್ಯೆ ಶ್ರೀಮತಿ ಶೋಭಾ ಕೊಳತ್ತಾಯ, ಪ್ರಾಥಮಿಕ ಶಾಲಾ ಮುಖ್ಯಗುರುಗಳಾದ ಶ್ರೀ ರಾಮ ನಾಕ್, ಕೆ.ಜಿ.ವಿಭಾಗದ ಮುಖ್ಯಸ್ಥೆ ಶ್ರೀಮತಿ ಮಮತಾ.ಆರ್ ಉಪಸ್ಥಿತರಿದ್ದರು. ಶ್ರೀಮತಿ ಪೂರ್ಣಿಮಾ ಕಾರ್ಯಕ್ರಮ ನಿರ್ವಹಿಸಿದರು.