ದಿನಾಂಕ 02-08-2016 ರಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 8 ನೇ ತರಗತಿ ವಿದ್ಯಾರ್ಥಿಗಳ ಪೋಷಕರ ಸಭೆಯು ಶಾಲಾ ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದ ಸಂಸ್ಕೃತ ಪ್ರಾಧ್ಯಾಪಕ ಡಾ.ಶ್ರೀಶ ಕುಮಾರ್ ಮಾತಾಡಿ ಶಿಕ್ಷಣವೆಂದರೆ ಒಂದು ಮುಷ್ಠಿಯಂತೆ. ಸರಕಾರ, ಆಡಳಿತ ಮಂಡಳಿ, ಶಿಕ್ಷಕವೃಂದ, ಪೋಷಕರು ಹಾಗೂ ವಿದ್ಯಾರ್ಥಿಗಳು ಐದು ಬೆರಳುಗಳಂತೆ ಒಟ್ಟಾಗಿ ಕಾರ್ಯನಿರ್ವಹಿಸಿದಾಗ ಶಿಕ್ಷಣದ ಮಟ್ಟ ಉನ್ನತವಾಗುತ್ತದೆ ಎಂದರು. ನಾವು ಮಕ್ಕಳಿಗೆ ನಡವಳಿಕೆಗಳನ್ನು ಕಲಿಸಿಕೊಟ್ಟು, ಭಾವನಾತ್ಮಕ ಸಂಬಂಧಗಳನ್ನು ಬೆಳಸುವ ಶಿಕ್ಷಣ ಇಂದಿನ ಅಗತ್ಯ ಎಂದರು. ಶಾಲಾ ಆಡಳಿತ ಮಂಡಳಿ ಸದಸ್ಯೆಯಾದ ಶ್ರೀಮತಿ ಶೋಭಾ ಕೊಳತ್ತಾಯ ಅಧ್ಯಕ್ಷತೆ ವಹಿಸಿ ಸಂದರ್ಭೋಜಿತವಾಗಿ ಮಾತನಾಡಿದರು.
ಶಾಲಾ ಮುಖ್ಯೋಪಾಧ್ಯಾಯರು ಸತೀಶ್ ಕುಮಾರ್ ರೈ ಪ್ರಾಸ್ತಾವಿಕ ಮಾತನಾಡಿದರು. ವೇದಿಕೆಯಲ್ಲಿ ಪ್ರಾಥಮಿಕ ವಿಭಾಗ ಮುಖ್ಯಗುರು ರಾಮ ನಾಕ್ ಹಾಗೂ ತರಗತಿ ಶಿಕ್ಷಕರು ಉಪಸ್ಥಿತರಿದ್ದರು. ಶಿಕ್ಷಕಿ ಆಶಾ.ಕೆ ಸ್ವಾಗತಿಸಿ, ಶಿಕ್ಷಕಿ ಭಾರತಿ.ಎಸ್.ಎ ವಂದಿಸಿ, ಶಿಕ್ಷಕಿ ಅನುರಾಧ ಕಾರ್ಯಕ್ರಮ ನಿರೂಪಿಸಿದರು.