ವಿವೇಕಾನಂದ ಆಂಗ್ಲಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ 10 ನೇ ತರಗತಿ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ.ಯ ನಂತರ ಮುಂದೇನು? ಎಂಬ ವಿಷಯದ ಕುರಿತು ವಿಶೇಷ ಕಾರ್ಯಾಗಾರ ನಡೆಯಿತು.
ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ಹಿರಿಯ ವಿದ್ಯಾರ್ಥಿನಿ ಕು| ರಶ್ಮಿ ಪಾರ್ವತಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಸಂವಾದ ನಡೆಸಿಕೊಟ್ಟರು. ೧೦ನೇ ತರಗತಿಯ ನಂತರ ತೆಗೆದುಕೊಳ್ಳಬಹುದಾದ ಪರೀಕ್ಷೆಗಳು ಮತ್ತು ಶಿಕ್ಷಣ ಪದ್ಧತಿಯ ಬಗ್ಗೆ ತಮ್ಮ ಅನುಭವಗಳನ್ನು ಹಂಚಿಕೊಂಡರು.
ಈ ಸಂದರ್ಭ ವೇದಿಕೆಯಲ್ಲಿ ಹಿರಿಯ ಶಿಕ್ಷಕರಾದ ಪ್ರಶಾಂತ್, ಮಾಲಿನಿ ಮತ್ತು ಪುಷ್ಪಲತಾರವರು ಉಪಸ್ಥಿತರಿದ್ದರು.
ಶಿಕ್ಷಕ ರಾಧಾಕೃಷ್ಣ ರೈ ಸ್ವಾಗತಿಸಿ ವಿದ್ಯಾರ್ಥಿನಿ ಲಹರಿ ವಂದಿಸಿದರು. ಶಾಲಾ ಮುಖ್ಯಗುರು ಸತೀಶ್ ರೈ ಸಹಕರಿಸಿದರು.