ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ಪುತ್ತೂರು, ಸಮರ್ಥ ಭಾರತ ಪುತ್ತೂರು ಘಟಕ ಇವರ ವತಿಯಿಂದ ಕೋಟಿ ವೃಕ್ಷ ಅಭಿಯಾನದ ಅಂಗವಾಗಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಪಾಣಾಜೆ ಗ್ರಾಮದ ಪೂಮಣಿ-ಕಿನ್ನಿಮಾಣಿ ದೈವಸ್ಥಾನದ ವಠಾರದಲ್ಲಿ ನಡೆಯಿತು.
ಈ ಕಾರ್ಯಕ್ರಮವನ್ನು ಪಾಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾರಾಯಣ ಪೂಜಾರಿಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಸಂಚಾಲಕ ಮುರಳೀಧರ ಪ್ರಾಸ್ತಾವಿಕ ಮಾತುಗಳೊಂದಿಗೆ ಶುಭ ಹಾರೈಸಿದರು.
ಪಾಣಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುರೇಂದ್ರ ರೈ, ಅರಣ್ಯಪಾಲಕ ಮೋಹನ್, ಪಾಣಾಜೆ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಜಾಣು ನಾಯ್ಕ್, ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಸಂಜೀವ ರೈ, ಕಾರ್ಯದರ್ಶಿ ಸತ್ಯನಾರಾಯಣ ಅಡಿಗ, ದೈವಸ್ಥಾನದ ಆಡಳಿತ ಮೊಕ್ತೇಸರ ಕೃಷ್ಣ ಕಡಮಾಜೆ, ಬಿ.ಜೆ.ಪಿ. ಸ್ಥಾನೀಯ ಸಮಿತಿ ಅಧ್ಯಕ್ಷ ಸದಾಶಿವ ರೈ, ಕಾರ್ಯದರ್ಶಿ ರವೀಂದ್ರ ಭಂಡಾರಿ, ಗ್ರಾಮ ಪಂಚಾಯತ್ ಸದಸ್ಯರಾದ ಕೇಶವ ಮುರಳಿ, ಜಗನ್ಮೋಹನ ರೈ, ಯಶೋದಾ, ರೈತಮೋರ್ಚಾದ ರವಿಶಂಕರ ಶರ್ಮ ಬೊಳ್ಕಲ್ಲು ಉಪಸ್ಥಿತರಿದ್ದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರಾದ ಶಾರದಾ ಶೆಟ್ಟಿ, ರೇಷ್ಮಾ.ಕೆ, ಗಿರೀಶ್ ಕಣಿಯಾರು, ಮಹೇಶ್ ಹಿರೇಮಣಿ ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಗಿಡನೆಡುವಿಕೆಯಲ್ಲಿ ಭಾಗವಹಿಸಿದರು. ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ನಾರಾಯಣ ಪ್ರಕಾಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ರವೀಂದ್ರ ಭಂಡಾರಿ ವಂದಿಸಿದರು.