ದಿನಾಂಕ 5-7-2017 ರಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ವಿವೇಕನಗರ, ತೆಂಕಿಲ, ಪುತ್ತೂರು ಇಲ್ಲಿ 2 ನೇ ತರಗತಿಯ ಮಕ್ಕಳ ಪೋಷಕರ ಸಭೆಯು ಶಾಲಾ ಸಭಾಂಗಣದಲ್ಲಿ ನಡೆಯಿತು. ಮಗುವಿನ ಭಾವನೆಗಳನ್ನು ಕಟ್ಟಿಹಾಕಬೇಡಿ. ಅದರ ಎಲ್ಲಾ ರೀತಿಯ ಚಟುವಟಿಕೆಗಳಿಗೆ ಮುಕ್ತ ಅವಕಾಶ ನೀಡಿ ಮಗುವಿನ ಸರ್ವಾಂಗೀಣ ಬೆಳವಣಿಗೆಯಲ್ಲಿ ತಂದೆ-ತಾಯಿಯರಿಬ್ಬರ ಪಾತ್ರ ಸಮಾನವಾದುದು ಎಂದು ವಿವೇಕಾನಂದ ಬಿ.ಎಡ್ ಕಾಲೇಜಿನ ಪ್ರಾಧ್ಯಾಪಕಿ ಶ್ರೀಮತಿ ಕೃಷ್ಣವೇಣಿಯವರು ಹೇಳಿದರು.
ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಚಂದ್ರಶೇಖರ್ ಉಪಸ್ಥಿತರಿದ್ದು, ಅಧ್ಯಕ್ಷೀಯ ನುಡಿಗಳನ್ನಾಡಿದರು. ಶಾಲಾ ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ ರಾಮ ನಾಯ್ಕ್ ಪ್ರಸ್ತಾವನೆಗೈದರು. ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಕುಮಾರ್ ರೈ ಪೋಷಕರ ಪ್ರಶ್ನೆಗಳಿಗೆ ಉತ್ತರಿಸಿದರು. ವೇದಿಕೆಯಲ್ಲಿ ಪೂರ್ವಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಶ್ರೀಮತಿ ಮಮತಾ ಉಪಸ್ಥಿತರಿದ್ದರು. ಶಿಕ್ಷಕಿ ಶ್ರೀಮತಿ ಕವಿತಾ ಪ್ರಾರ್ಥಿಸಿ, ಶಿಕ್ಷಕಿ ಅಕ್ಷತಾ ಸ್ವಾಗತಿಸಿದರು. ಶ್ರೀಮತಿ ಆಶಾ ಶೆಟ್ಟಿ ವಂದಿಸಿದರು. ಶ್ರೀಮತಿ ಯಶೋಧ ಕಾರ್ಯಕ್ರಮ ನಿರೂಪಿಸಿದರು.