QR Code Business Card

9ನೇ ತರಗತಿಯ ಶಿಕ್ಷಕ-ರಕ್ಷಕ ಸಂಘದ ಸಭೆ

ದಿನಾಂಕ 14-7-2018 ಶನಿವಾರ 9ನೇ ತರಗತಿಯ ಶಿಕ್ಷಕ-ರಕ್ಷಕ ಸಂಘದ ಸಭೆಯನ್ನು ಕರೆಯಲಾಯಿತು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಹಿರಿಯ ಸದಸ್ಯ ಭೀರ್ಮಣ್ಣ ಗೌಡರವರು ಮಾತನಾಡಿ ಶಿಕ್ಷಕರು ಮತ್ತು ಪೋಷಕರು ಪರಸ್ಪರ ಸಹಕರ ಮನೋಭಾವನೆಯ ಮೂಲಕ ಮಕ್ಕಳಲ್ಲಿರುವ ಸೂಕ್ತ ಪ್ರತಿಭೆಗಳನ್ನು ಗುರುತಿಸಬೇಕು. ಶಿಕ್ಷಣದ ವ್ಯವಸ್ಥೆ ನಿಂತ ನೀರಾಗದೆ ಸದಾ ಹರಿಯುತ್ತಿರುವ ನೀರಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ವೆಂಕಟೇಶ್ವರ ಅಮೈ ಅವರು ಮಕ್ಕಳು ಸಮಾಜದ ರತ್ನಗಳಂತೆ, ಅವರಲ್ಲಿ ಹಲವಾರು ಪ್ರತಿಭೆಗಳಿವೆ ಅದನ್ನು ಒರೆಗೆ ಹಚ್ಚಿ ಹೊರತೆಗೆಯುವ ಕಾರ್ಯವನ್ನು ಶಿಕ್ಷಕರು ಮಾಡಬೇಕು. ತುಂಟ ಹುಡುಗನನ್ನು ಕೂಡ ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯನ್ನಾಗಿಸುವುದೇ ನಮ್ಮ ಗುರಿ ಎಂದು ಹೇಳಿದರು.

ಕಾರ್ಯಕ್ರಮ ಮೊದಲು ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಶ್ರೀ ಜಿ.ಎಲ್.ಆಚಾರ್ಯರವರಿಗೆ ಶ್ರದ್ಧಾಂಜಲಿ ಅರ್ಪಿಸಿಸಲಾಯಿತು. ವೇದಿಕೆಯಲ್ಲಿ ಪ್ರಾಥಮಿಕ ವಿಭಾಗದ ಮುಖ್ಯಗುರುಗಳಾದ ಶ್ರೀಮತಿ ಸಂಧ್ಯಾ, ಕೆ.ಜಿ.ವಿಭಾಗದ ಮುಖ್ಯಸ್ಥೆ ಶ್ರೀಮತಿ ಮಮತಾ, ತರಗತಿ ಶಿಕ್ಷಕರು ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯರು ಶ್ರೀ ಸತೀಶ್ ಕುಮಾರ್ ರೈ ಪ್ರಾಸ್ತಾವಿಕ ಮಾತುಗಳ್ನಾಡಿದರು. ಶಿಕ್ಷಕಿ ಸುಜಾತ ಸ್ವಾಗತಿಸಿ, ವಿದ್ಯಾರ್ಥಿನಿಯರು ಪ್ರಾರ್ಥಿಸಿ, ಶಿಕ್ಷಕಿ ಭಾರತಿ.ಎಸ್.ಎ ವಂದಿಸಿ, ಶಿಕ್ಷಕಿ ವೀಣಾ ಜೋಶಿ ಕಾರ್ಯಕ್ರಮ ನಿರೂಪಿಸಿದರು.