ದಿನಾಂಕ 26-7-2018 ನೇ ಗುರುವಾರ 2 ನೇ ತರಗತಿಯ ಶಿಕ್ಷಕ-ರಕ್ಷಕ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ವೆಂಕಟೇಶ್ವರ ಅಮೈ ವಹಿಸಿದ್ದರು. ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಕುಮಾರ್ ರೈ ಪ್ರಸ್ತಾವನೆಗೈದರು. ಸಂಚಾಲಕರಾದ ಶ್ರೀ ಮುರಳೀಧರ್, ಪ್ರಾಥಮಿಕ ಶಾಲಾ ಮುಖ್ಯಗುರು ಶ್ರೀಮತಿ ಸಂಧ್ಯಾ, ಕೆ.ಜಿ.ವಿಭಾಗದ ಮುಖ್ಯಸ್ಥೆ ಶ್ರೀಮತಿ ಮಮತಾ ಮತ್ತು ತರಗತಿ ಶಿಕ್ಷಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶೈಕ್ಷಣಿಕ ವರ್ಷದ ಶಿಕ್ಷಕ-ರಕ್ಷಕ ಸಂಘದ ಸದಸ್ಯರನ್ನು ಆರಿಸಲಾಯಿತು. ಶಿಕ್ಷಕಿ ವೀಣಾ ಕುಮಾರಿ ಪ್ರಾರ್ಥಿಸಿದರು. ಶಿಕ್ಷಕಿ ಕವಿತಾ ಸ್ವಾಗತಿಸಿ, ಶಿಕ್ಷಕಿ ರೇಷ್ಮಾ ವಂದಿಸಿದರು. ಶಿಕ್ಷಕಿ ಸಹನಾ ಪೈ ಕಾರ್ಯಕ್ರಮ ನಿರೂಪಿಸಿದರು.