2018-19 ನೇ ಸಾಲಿನ 3ನೇ ತರಗತಿಯ ಪೋಷಕರ ಸಭೆಯು 28-7-2018 ರ ಶನಿವಾರ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿ ಸಂಚಾಲಕರಾದ ಶ್ರೀ ಮುರಳೀಧರ ಕೆ. ವಹಿಸಿ ಮಾತನಾಡಿದರು. ಶಾಲಾ ಮುಖ್ಯೋಪಾಧ್ಯಾಯರು ಶ್ರೀ ಸತೀಶ್ ಕುಮಾರ್ ರೈ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಾಥಮಿಕ ಶಾಲಾ ಮುಖ್ಯಗುರು ಶ್ರೀಮತಿ ಸಂಧ್ಯಾ, ಕೆ.ಜಿ.ವಿಭಾಗದ ಮುಖ್ಯಸ್ಥೆ ಶ್ರೀಮತಿ ಮಮತಾ, ತರಗತಿ ಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು. ಶಿಕ್ಷಕಿ ಅಕ್ಷಿತಾ ಸ್ವಾಗತಿಸಿ, ಶಿಕ್ಷಕಿ ಶರ್ಮಿಳಾ ವಂದಿಸಿ, ಶಿಕ್ಷಕಿ ರಮ್ಯ ಕಾರ್ಯಕ್ರಮ ನಿರೂಪಿಸಿದರು.