Agastya Foundation ವತಿಯಿಂದ ದಿನಾಂಕ 17 ರಿಂದ 19 ರ ತನಕ ಹುಬ್ಬಳ್ಳಿಯಲ್ಲಿ ನಡೆದ ವಿಜ್ಞಾನ ಮಾದರಿ ಮತ್ತು ತಯಾರಿಕಾ ಸ್ಪರ್ಧೆ ಮತ್ತು ಪ್ರದರ್ಶನದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 9 ನೇ ತರಗತಿಯ ವಿಜಿತ್ ಮತ್ತು ಅದೈತ್ ಇವರು ಭಾಗವಹಿಸಿ ವಿಶೇಷ ಬಹುಮಾನವನ್ನು ಪಡೆದುಕೊಂಡಿರುತ್ತಾರೆ. ಇವರಿಗೆ ವಿಜ್ಞಾನ ವಿಭಾಗದ ಶಿಕ್ಷಕಿ ಶಾರದ ಶೆಟ್ಟಿ ಮತ್ತು ಅಟಲ್ ಟಿಂಕರಿಂಗ್ ಲ್ಯಾಬ್ನ ಶಿಕ್ಷಕ ಶಿವಪ್ರಸಾದ್ ಇವರು ಮಾರ್ಗದರ್ಶನ ನೀಡಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ತಿಳಿಸಿರುತ್ತಾರೆ.