QR Code Business Card

ಗಣರಾಜ್ಯೋತ್ಸವ ಆಚರಣೆ

ಸಂವಿಧಾನ ಜನತೆಗೆ ನೀಡಿದ ಹಕ್ಕು ಮತ್ತು ಕರ್ತವ್ಯಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಿ, ದೇಶದ ಒಗ್ಗಟ್ಟನ್ನು ಸಾಧಿಸಿದಾಗ ಗಣರಾಜ್ಯೋತ್ಸವ ಆಚರಣೆ ಅರ್ಥಪೂರ್ಣವಾಗುತ್ತದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ | ಕೃಷ್ಣ ಭಟ್ ಕೊಂಕೋಡಿ ಹೇಳಿದರು. ಅವರು ತೆಂಕಿಲ ವಿವೇಕಾನಂದ ವಿದ್ಯಾಸಂಸ್ಥೆಗಳಲ್ಲಿ ೭೦ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಧ್ವಜಾರೋಹಣ ನಿರ್ವಹಿಸಿ ಮಾತನಾಡುತ್ತಿದ್ದರು.

ಸಮಾರಂಭದ ಪ್ರಾರಂಭದಲ್ಲಿ ವಿವೇಕಾನಂದ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಆಕರ್ಷಕ ಪಥಸಂಚಲನ ನಡೆಯಿತು. ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆಗಳು, ನರೇಂದ್ರ ಪದವಿಪೂರ್ವ ಕಾಲೇಜು, ವಿವೇಕಾನಂದ ಶಿಕ್ಷಣ ತರಬೇತಿ ವಿದ್ಯಾಲಯಗಳ ಆಡಳಿತ ಮಂಡಳಿಯ ಪದಾಧಿಕಾರಿಗಳು, ಪೋಷಕರು, ಶಿಕ್ಷಕ-ಶಿಕ್ಷಕೇತರ ವೃಂದದವರು ಪಾಲ್ಗೊಂಡಿದ್ದರು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಸಂಚಾಲಕ ಶ್ರೀ ಮುರಳೀಧರ್ ಸ್ವಾಗತಿಸಿ, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಸದಸ್ಯ ಶ್ರೀ ರಮೇಶ್‌ಚಂದ್ರ ಎಂ. ವಂದಿಸಿದರು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ಶ್ರೀಮತಿ ಗೀತಾ ಜಯಪ್ರಸಾದ್ ಕೆ. ಕಾರ್ಯಕ್ರಮ ನಿರೂಪಿಸಿದರು.